ಶಿರಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ವರಿಷ್ಠರ ಹೆಗಲಿಗೆ : ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.11- ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಜೆಪಿಭವನದಲ್ಲಿಂದು ಶಿರಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರಾಗಿದ್ದ ಸತ್ಯ ನಾರಾಯಣ ಅವರ ನಿಧನದಿಂದ ಉಪಚುನಾವಣೆ ಎದುರಾಗುತ್ತಿದೆ.

ಯಾರೇ ಅಭ್ಯರ್ಥಿಯಾದರೂ ಕಾರ್ಯಕರ್ತರು ಅವರ ಕೈಯನ್ನು ಬಲಪಡಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು. ನಮ್ಮ ಪಕ್ಷದ ಹಿಡಿತದಲ್ಲಿದ್ದ ಶಿರಾ ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು, ರಾಷ್ಟ್ರೀಯ ಪಕ್ಷಗಳ ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ. ಪ್ರಾದೇಶಿಕ ಪಕ್ಷದ ಶಕ್ತಿ ಉಳಿಸಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.

Facebook Comments