ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಏಕೆ..? ಆತುರ ಏನಿದೆ..? : ಹೆಚ್ಡಿಕೆ ಪ್ರಶ್ನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23- ಎಪಿಎಂಸಿ ಕಾಯ್ದೆ ತಿದ್ದುಪಡಿ ತರುವಾಗ ಯಾವ ರೈತರ ಜತೆ ಸರ್ಕಾರ ಚರ್ಚೆ ಮಾಡಿತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕೊರೊನಾ ಪ್ರಕರಣ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಎಪಿಎಂಸಿ ಕಾಯ್ದೆಯನ್ನು ತಾರಾತುರಿಯಲ್ಲಿ ಸುಗ್ರೀವಾಜ್ಞೆ ತರುವ ಮೂಲಕ ಪ್ರಯತ್ನ ಏಕೆ ಮಾಡಲಾಯಿತು ಎಂದು ಪ್ರಶ್ನಿಸಿದರು.

ಕಾಯ್ದೆಯನ್ನು ತರುವ ಆತುರ ಏನಿದೆ? ಮೇ ತಿಂಗಳಲ್ಲೇ ಸುಗ್ರಿವಾಜ್ಞೆ ತಂದಿದೆ. ಯಾವ ವಿರೋಧ ಪಕ್ಷದವರ ಜತೆ ಸರ್ಕಾರ ಚರ್ಚೆ ಮಾಡಿದೆ. ಸಾವಿರಾರು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಸಾಮಾಜಿಕ ಅಂತರವಿಲ್ಲ, ಇಂತಹ ಪರಿಸ್ಥಿತಿಗೆ ರೈತರನ್ನು ತಳ್ಳಿದವರು ಯಾರು ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರದಲ್ಲಿ ಸಚಿವರು ಲಘುವಾಗಿ ಮಾತನಾಡುತ್ತಿದ್ದಾರೆ. ಮುಂದೆ ಆಗುವ ದುಷ್ಪರಿಣಾಮದ ಹೊರೆಯನ್ನು ಅವರೇ ಹೊರಬೇಕಾಗುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Facebook Comments