ದೇವೇಗೌಡರ ಜೊತೆ ಹೆಚ್ಡಿಕೆ ಮತ್ತು ಹೆಚ್.ಡಿ.ರೇವಣ್ಣ ಮಹತ್ವದ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 24- ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಇಂದು ಬೆಳಗ್ಗೆ ದೇವೇಗೌಡರ ನಿವಾಸಕ್ಕೆ ತೆರಳಿದ ಕುಮಾರಸ್ವಾಮಿ ಮತ್ತು ರೇವಣ್ಣ ಅವರು, ಸರ್ಕಾರದ ಮುಂದಿನ ನಡೆ ಕುರಿತಂತೆ ಸಲಹೆ, ಮಾರ್ಗದರ್ಶನ ಪಡೆದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಸೋಲು, ತುಮಕೂರು, ಮಂಡ್ಯದಲ್ಲಿ ಜೆಡಿಎಸ್‍ಗೆ ಹಿನ್ನಡೆಗೆ ಕಾರಣವಾದ ಅಂಶಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಕಾರ್ಯ ಲೋಪ ಸೇರಿದಂತೆ ಇನ್ನಿತರ ವಿಷಯಗಳನ್ನು ಆಧರಿಸಿ ಪರಾಮರ್ಶೆ ನಡೆಸಿದರು.

ಈ ನಡುವೆ ಹಾಸನ ಕ್ಷೇತ್ರದಿಂದ ಜಯ ಸಾಧಿಸಿದ ಪ್ರಜ್ವಲ್ ರೇವಣ್ಣ ಅವರ ರಾಜೀನಾಮೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮೂವರು ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಇಂದು ಸುದೀರ್ಘ ಮಾತುಕತೆ ನಡೆಸಿದ ಪಕ್ಷದ ಪ್ರಸ್ತುತ ಸನ್ನಿವೇಶವನ್ನು ನಿಭಾಯಿಸುವ ಜೊತೆಗೆ ಸರ್ಕಾರದ ಮುನ್ನಡೆಗೆ ಅಗತ್ಯ ಸಲಹೆಸೂಚನೆಗಳನ್ನು ಪಡೆದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ