ಅಭಿಮಾನಕ್ಕೆ ನಾನು ಚಿರಋಣಿ : ಎಚ್‍ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.16- ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಎಚ್‍ಡಿಕೆ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಮತ್ತು ಕುಮಾರಣ್ಣ ನಾ ಕಂಡಂತೆ ಎಂಬ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಮುಖಂಡರು, ಕಾರ್ಯಕರ್ತರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ನನ್ನ ಮೇಲೆ ಪಕ್ಷದ ಮುಖಂಡರು, ಕಾರ್ಯಕರ್ತರು ಇಟ್ಟಿರುವ ಪ್ರೀತಿ-ವಿಶ್ವಾಸವೇ ಶ್ರೀರಕ್ಷೆ. ಜೀವನ ಪೂರ್ತಿ ನಿಮ್ಮ ವಿಶ್ವಾಸಕ್ಕೆ ಋಣಿಯಾಗಿರುತ್ತೇನೆ. ಸಂಕ್ರಾಂತಿಯಿಂದ ಪಕ್ಷ ಸಂಘಟನೆಗೆ ಒತ್ತು ಕೊಡುವುದಾಗಿ ಹೇಳಿದರು.

ಎಲ್ಲರೂ ಮುಂದಿನ ದಿನಗಳಲ್ಲಿ ಒಟ್ಟಾಗಿ ಸೇರಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಕರೆ ಕೊಟ್ಟರು. ಕೋವಿಡ್‍ನಿಂದಾಗಿ ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಸಾರ್ವಜನಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲಾಗುತ್ತಿಲ್ಲ.

ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಪಕ್ಷ ಸಂಘಟನೆ ಮಾಡೋಣ ಎಂದರು.ದೂರವಾಣಿ ಮೂಲಕವೇ ಪಕ್ಷದ ಮುಖಂಡರು, ಕಾರ್ಯಕರ್ತರು ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.

# ಎಚ್‍ಡಿಕೆಗೆ ಪ್ರಧಾನಿ ಶುಭಾಶಯ : 
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ದೇವರು ನಿಮಗೆ ದೀರ್ಘಾಯುಷ್ಯ, ಆರೋಗ್ಯ ಕರುಣಿಸಲಿ ಎಂದು ಟ್ವಿಟರ್ ಮೂಲಕ ಶುಭ ಹಾರೈಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಅವರು ಪ್ರಧಾನಿ ಅವರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.

Facebook Comments