ಮುಂದಿನ ಚುನಾವಣೆಯಲ್ಲಿ ಜೆಡಿಎಸ್‍ಗೆ ಅಧಿಕಾರ ಫಿಕ್ಸ್ : ಹೆಚ್‌ಡಿಕೆ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.28- ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕøತಿ ಇರುವುದಿಲ್ಲ. ಶ್ರಮ ಹಾಕಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ಕುರಿತು ಜೆಡಿಎಸ್ ಶಾಸಕರು ಕಳೆದ ಚುನಾವಣೆಯಲ್ಲಿ ಸೋತಿದ್ದ ಅಭ್ಯರ್ಥಿಗಳು, ಮುಂದಿನ ಚುನಾವಣೆಯಲ್ಲಿ ಸ್ರ್ಪಧಿಸುವ ಅಭ್ಯರ್ಥಿಗಳ ಜತೆ ಮಿಷನ್ 123 ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ 2023ರ ವಿಧಾನಸಭೆ ಚುನಾವಣೆ ರೂಟ್‍ಮ್ಯಾಪ್ ಪ್ರಸ್ತುತಪಡಿಸಿದರು.

ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಶೇ.50ರಷ್ಟು ಶ್ರಮ ವಹಿಸಿದರೆ ಅಧಿಕಾರ ಸಿಗಲಿದೆ ಎಂದರು. ಬಿಡದಿ ಬಳಿಯ ತಮ್ಮ ತೋಟದ ಮನೆಯಲ್ಲಿ ನಡೆಯುತ್ತಿರುವ ಜನತಾಪರ್ವ 1.0 ಹಾಗೂ ಮಿಷನ್ 123ಗಾಗಿ ಆಯೋಜಿಸಿರುವ ಕಾರ್ಯಾಗಾರದ 2ನೇ ದಿನವಾದ ಇಂದು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಶಾಲಾ ಶಿಕ್ಷಕರಂತೆ ಮಾರ್ಗದರ್ಶನ ನೀಡಿದರು.

ನೀರಾವರಿ ಮತ್ತು ರೈತಪರ ಯೋಜನೆ ನಮ್ಮ ಪಕ್ಷದ ಮೊದಲ ಆದ್ಯತೆಯಾಗಿದೆ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಅನುಮತಿ ಇಲ್ಲದೆ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಇಂತಹ ಅವಕಾಶ ರಾಷ್ಟ್ರೀಯ ಪಕ್ಷಗಳಿಗಿಲ್ಲ ಎಂದು ಪ್ರಾದೇಶಿಕ ಪಕ್ಷದ ಶಕ್ತಿ ಬಗ್ಗೆ ಶಾಸಕರು, ಮುಖಂಡರಿಗೆ ಮನವರಿಕೆ ಮಾಡಿದರು.

2023ರ ಚುನಾವಣೆಯಲ್ಲಿ 120 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದು, ಮೇಕೆದಾಟು, ಕೃಷ್ಣಾಮೇಲ್ದಂಡೆ, ಮಹದಾಯಿ ಹಾಗೂ ಎತ್ತಿನಹೊಳೆ ಯೋಜನೆಗಳಿಗೆ ಜೀವ ತುಂಬುವುದು. ಆರೋಗ್ಯ, ಶಿಕ್ಷಣ, ಕೃಷಿ, ವಸತಿ ಕ್ಷೇತ್ರದಲ್ಲಿ ವಿಶೇಷ ಯೋಜನೆ ರೂಪಿಸಿ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪುಸುವ ಪಂಚರತ್ನ ಯೋಜನೆ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಜೆಡಿಎಸ್ ನಿ ಸ್ಥಾಪನೆ ಮಾಡಿ ಅದಕ್ಕೆ ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಲ್ಲಿ ಪಕ್ಷದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗಳಿಗೆ ಹಣ ನೀಡುವುದು, ಕಾರ್ಯಕರ್ತರು ನಿಧನರಾದಾಗ ಹಣ ನೀಡುವುದು, ಪಕ್ಷದ ನಾಯಕರಿಗೆ ಅಕಾರ ನೀಡುವುದರ ಬಗ್ಗೆ ಪ್ರಸ್ತಾಪ ಮಾಡಿದರು.

Facebook Comments