“ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಹೇಳಿದಷ್ಟು ಸುಲಭವಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.19- ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ. ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೈತ್ರಿ ಸರ್ಕಾರದ ಅವಯಲ್ಲಿ ಕಾಂಪಿಟ್ ವಿತ್ ಚೀನಾ ಎಂಬ ಯೋಜನೆಯನ್ನು ಜಾರಿಗೆ ತರಲಾಗಿತ್ತು ಎಂದಿದ್ದಾರೆ.

ಚೀನಾ ಉತ್ಪನ್ನ ಬಹಿಷ್ಕರಿಸಿ ಎಂಬುದು ದೇಶದ ಆಶೋತ್ತರಗಳಲ್ಲಿ ಒಂದಾಗಿದ್ದು, ಈ ಕೂಗು ಇತ್ತೀಚೆಗೆ ಬಲಗೊಳ್ಳುತ್ತಿದೆ. ದೇಶದ ಮಾರುಕಟ್ಟೆ ಆಕ್ರಮಿಸಿಕೊಂಡಿರುವ ಚೀನಾ ಉತ್ಪನ್ನಗಳಿಗೆ ನಮ್ಮ ಉತ್ಪನ್ನಗಳ ಮೂಲಕ ಸಡ್ಡು ಹೊಡೆಯಬೇಕೆಂಬ ಪರಿಕಲ್ಪನೆಯಡಿ 2018ರಲ್ಲಿ ಕಾಂಪಿಟ್ ವಿತ್ ಚೀನಾ ಎಂಬ ಯೋಜನೆಯನ್ನು ನಾನು ಸಿಎಂ ಆದಾಗ ರೂಪಿಸಲಾಗಿತ್ತು.

ಕಾಂಪಿಟ್ ವಿತ್ ಚೀನಾ ಯೋಜನೆ ಜಾರಿಗೆ ತರಲು ನನ್ನ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದಕ್ಕಾಗಿ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆ ಗಳಲ್ಲಿ 9 ಕ್ಲಸ್ಟರ್‍ಗಳನ್ನು ಸ್ಥಾಪಿಸಲಾಗಿತ್ತು ಎಂದು ಹೇಳಿದ್ದಾರೆ.

ಸ್ಥಳೀಯರಿಗೆ ಉದ್ಯೋಗ ಒದಗಿಸುವುದು, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆಯನ್ನು ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು ಯಶಸ್ವಿಯಾಗಿ ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು.

ಆದರೆ, ಮೈತ್ರಿ ಸರ್ಕಾರದ ಈ ಯೋಜನೆಯನ್ನು ಇಂದಿನ ಸರ್ಕಾರ ಏನು ಮಾಡಿದೆ? ಮುಂದುವರೆಸಿಕೊಂಡು ಹೋಗಿದೆಯೋ ಇಲ್ಲವೋ ತಿಳಿಯದು ಎಂದಿದ್ದಾರೆ.

ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಕಾರವಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು. ಮೈತ್ರಿ ಸರ್ಕಾರದ ಯೋಜನೆಗಳು ಅದಕ್ಕೆ ಮಾದರಿ ಎಂದು ಸಮರ್ಥಿಸಿಕೊಂಡಿದ್ದಾರೆ.

Facebook Comments

Sri Raghav

Admin