ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕುರಿತು ಹೆಚ್ಡಿಕೆ ಪ್ರತಿಕ್ರಿಯೆ ಏನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.3- ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತಂತೆ ತಾವು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಾಜಕೀಯ ವ್ಯಕ್ತಿಗಳ ಈ ರೀತಿಯ ನಡವಳಿಕೆಗಳಿಂದ ಸಮಾಜದಲ್ಲಿ ಯಾವ ರೀತಿ ಸಂದೇಶ ಹೋಗುತ್ತದೆ ? ಈಗಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರಿಂದಲೇ ಪ್ರತಿಕ್ರಿಯೆ ಪಡೆಯಬೇಕು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ರಾಕ್ಷಸಿ ಸರ್ಕಾರವೆಂದು ಉಲ್ಲೇಖಿಸಿ ಆ ಸರ್ಕಾರವನ್ನು ತೆಗೆದು ರಾಮರಾಜ್ಯ ತಂದಿದ್ದೇವೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದರು. ಯಾವ ರಾಮರಾಜ್ಯ ತಂದಿದ್ದಾರೆ ಎಂಬುದನ್ನು ಎಲ್ಲರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಿಡಿ ವಿಚಾರದ ಬಗ್ಗೆ ತಾವು ಹೆಚ್ಚು ಚರ್ಚಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Facebook Comments

Sri Raghav

Admin