“ನಿಖಿಲ್ ಮದುವೆ ವಿಷಯದಲ್ಲೂ ಕೆಲವರು ವಿಷ ಕಾರಿದರು, ಆದರೆ ಸಿಎಂ ಸತ್ಯದ ಪರ ನಿಂತರು”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.19-ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ರಾಜ್ಯ ರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು ಎಂದಿದ್ದಾರೆ.

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.

ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಮನದ ಕೋಪ ತನ್ನ ಅರಿವಿನ ಕೇಡು

ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ  ನೆರೆ ಮನೆಯ ಸುಡದು ಕೂಡಲಸಂಗಮದೇವಾ ಎಂಬ ಶರಣರ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

Facebook Comments

Sri Raghav

Admin