Thursday, March 28, 2024
Homeರಾಜ್ಯಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ

ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ

ನವದೆಹಲಿ,ಜ.18- ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡಿರುವ ಕೊಡುಗೆ ಏನು? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ದಟತನ. ಇಂಥ ಹೇಳಿಕೆಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಕ್ಕೂಟ ವ್ಯವಸ್ಥೆಯಲ್ಲಿ ವಿಶ್ವಾಸದಿಂದ ಕೆಲಸ ಮಾಡಬೇಕು. ಬೀದಿಯಲ್ಲಿ ನಿಂತು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ರಾಜ್ಯದ ಜನತೆಗೆ ಯಾವುದೇ ಉಪಯೋಗ ಆಗುವುದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೇ ಹಣಕಾಸು ಆಯೋಗ ರಚನೆಯಾಗಿದೆ.

ಇದೀಗ 14-15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬರಬೇಕಾಗಿದ್ದ ಆರ್ಥಿಕ ನೆರವು ಕಡಿಮೆಯಾಗಿದೆ ಎಂಬ ಆರೋಪ ಮಾಡುವ ಬದಲು ಅಂಕಿ-ಅಂಶಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿ ಸರಿಪಡಿಸಿಕೊಳ್ಳಬೇಕು ಎಂದರು.

ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ

ಮುಂದಿನ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಕೇಂದ್ರ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ರಾಜ್ಯ ಬಿಜೆಪಿ ಘಟಕ ಮತ್ತು ಜೆಡಿಎಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಹಿನ್ನಡೆಯಾಗುತ್ತದೆ, ಯಾವ ಕ್ಷೇತ್ರದಲ್ಲಿ ಯಾವ ರೀತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಚರ್ಚಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಬಿಜೆಪಿ ತಂಡವು ಎರಡು,ಮೂರು ಸರ್ವೆಗಳನ್ನು ನಡೆಸಿದ್ದು, ಕ್ಷೇತ್ರವಾರು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅವನ್ನು ಅವಲೋಕಿಸಿ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಮೈತ್ರಿಯ ಉದ್ದೇಶವಾಗಿದೆ ಎಂದರು. ಕೇಂದ್ರ ಮಂತ್ರಿಯಾಗುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆ ಎರಡು, ಮೂರು ತಿಂಗಳು ಮಾತ್ರ ಬಾಕಿ ಉಳಿದಿದೆ. ಶೀಘ್ರದಲ್ಲೇ ನೀತಿ ಸಂಹಿತೆ ಜಾರಿಯಾಗುವುದರಿಂದ ಈ ಸಂದರ್ಭದಲ್ಲಿ ಮಂತ್ರಿಯಾಗಿ ರಾಜ್ಯಕ್ಕೆ ಮತ್ತು ಕೇಂದ್ರದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ವಿಷಯ ಏಕೆ ಚರ್ಚೆಗೆ ಬಂತು ಎಂಬುದೇ ನನಗೆ ಯಕ್ಷಪ್ರಶ್ನೆಯಾಗಿದೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಮಂಡ್ಯ ಮಾತ್ರವಲ್ಲದೆ ನನಗೆ ರಾಜಕೀಯ ಜನ್ಮ ನೀಡಿದ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ. ತುಮಕೂರಿನಲ್ಲಿ ಕಳೆದ ಬಾರಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಸೋಲಿಸಿದ್ದರು. ಬಿಜೆಪಿ ನಾಯಕರು ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ನಾನು ಆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ. ನಾನು ಸ್ಪರ್ಧೆ ಬಗ್ಗೆ ಯಾವುದನ್ನು ತೀರ್ಮಾನಿಸಿಲ್ಲ ಎಂದು ಹೇಳಿದರು.

RELATED ARTICLES

Latest News