ಮೈತ್ರಿ ಸರ್ಕಾರದಲ್ಲಿ ಸಮಸ್ಯೆಗಳಿದ್ದರೆ ಎಚ್‍ಡಿಕೆ-ಗೌಡರು ಬಗೆಹರಿಸುತ್ತಾರೆ : ಎಚ್.ಡಿ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.4-ಜೆಡಿಎಸ್ ಪಕ್ಷ ಹಾಗೂ ಮೈತ್ರಿ ಸರ್ಕಾರದಲ್ಲಿ ಸಮಸ್ಯೆಗಳಿದ್ದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಬಗೆಹರಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರುವ ವಿಷಯದ ಬಗ್ಗೆ ಗಮನ ಸೆಳೆದಾಗ ಎಲ್ಲಾ ಸಮಸ್ಯೆ, ಗೊಂದಲಗಳ ಬಗ್ಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿ ಬಗೆಹರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಯಾವುದೇ ಗೊಂದಲ ಸಮಸ್ಯೆ ಗಳಿದ್ದರೂ ಕೂಡ ನಾಯಕರು ಚರ್ಚಿಸಿ ಪರಿಹರಿಸುತ್ತಾರೆ ಎಂದಷ್ಟೇ ಹೇಳಿದರು.

Facebook Comments