ಮಳೆ ಹಾನಿ : ಪರಿಹಾರ ಬಿಡುಗಡೆಗೆ ರೇವಣ್ಣ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಆ.3- ಜಿಲ್ಲಾಯಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಬಹುತೇಕ ರಸ್ತೆಗಳು ಹದಗೆಟ್ಟಿದ್ದು ಹಲವು ಮಂದಿ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಈ ನಿಟ್ಟಿನಲ್ಲಿ ಪರಿಹಾರ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲಾಯಲ್ಲಿ ನೆರೆ ಹಾವಳಿಗೆ ಬಹುತೇಕ ಕಡೆ ರಸ್ತೆ ಸಂಪೂರ್ಣ ಹದಗೆಟ್ಟಿದೆ ಅಲ್ಲದೆ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು ಗುಡಿಸಲಿನಲ್ಲಿ ವಾಸ ಮಾಡುವಂತಾಗಿದೆ .ಇವುಗಳ ಪರಿಹಾರ ಕಾರ್ಯ ಕೈಗೊಳ್ಳಲು ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಯಲ್ಲಿ ಅಂದಾಜು 10 ಕೋಟಿಗೂ ಅಧಿಕ ನಷ್ಟ ಸಂಭವಿಸಿದ್ದು ಸಕಲೇಶಪುರ -ಬೇಲೂರು ತಾಲೂಕಿನಲ್ಲಿ ಅತಿ ಹೆಚ್ಚು ಹಾನಿ ಸಂಭವಿ ಸಿದೆ ಎಂದು ಹೇಳಿದ ಅವರು , ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದ್ದು ಕೂಡಲೇ ಪರಿಹಾರ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಮೂರನೆ ಅಲೆ-ವೈದ್ಯಕೀಯ ಸೇವೆಗೆ ಒತ್ತಾಯ: ಈಗಾಗಲೇ ನೆರೆಯ ರಾಜ್ಯಗಳಲ್ಲಿ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಮುಂಜಾಗೃತಾ ಕ್ರಮವಾಗಿ ಜಿಲ್ಲಾಯಲ್ಲಿ ಅಗತ್ಯ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ರೇವಣ್ಣ ಒತ್ತಾಯಿಸಿದರು.

ಕೇರಳ ರಾಜ್ಯದಲ್ಲಿ ಪ್ರತಿದಿನ 20 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರ ವರದಿ ಪತ್ತೆಯಾಗುತ್ತಿದೆ. ತಮಿಳುನಾಡಿನಲ್ಲಿಯೂ ಸಹ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಗೃತ ಕ್ರಮ ಅವಶ್ಯಕ ಎಂದು ಹೇಳಿದರು.

ವಿಶೇಷ ಅರ್ಥ ಬೇಡ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರನ್ನು ಭೇಟಿ ಮಾಡಿರುವ ಸಂಬಂಧ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಓರ್ವ ಮುಖ್ಯಮಂತ್ರಿ ಮನೆಗೆ ಆಗಮಿಸಿದರೆ ಅವರನ್ನು ಅಭಿನಂದಿಸುವುದು ನಮ್ಮ ಕರ್ತವ್ಯ ವಾಗಿದೆ. ಇದು ಒಂದು ಸೌಜನ್ಯದ ಭೇಟಿಯಾಗಿದ್ದು ಇದಕ್ಕೆ ರಾಜಕೀಯ ಬಣ್ಣ ಬೆರೆ ಸುವುದು ಬೇಡ ಎಂದು ರೇವಣ್ಣ ಹೇಳಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಯ ಸಮಸ್ಯೆ ಹಾಗೂ ಅತಿವೃಷ್ಟಿ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳುವ ಸಂಬಂಧ ಮಾತನಾಡಿದ್ದೇನೆ ಇದನ್ನು ಬಿಟ್ಟು ಯಾವುದೇ ರಾಜಕೀಯ ಮಾತುಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

#ಹುಡಾ ಮುಚ್ಚಲು ಒತ್ತಾಯ: ಹಾಸನ ನಗರವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ಖಾಸಗಿ ಲೇಔಟ್ ಗಳು ತಲೆ ಎತ್ತುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಲೇಔಟ್ ನೆಪದಲ್ಲಿ ಹಗಲು ದರೋಡೆ ನಡೆಯುತ್ತಿದೆ ಇದರ ವಿರುದ್ಧ ಕ್ರಮ ಅಗತ್ಯ ಇಲ್ಲವಾದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರವನ್ನು ಮುಚ್ಚಿಸುವಂತೆ ರೇವಣ್ಣ ಕಿಡಿಕಾರಿದರು .

#ಗಡ್ಕರಿ ಭೇಟಿ: ಜಿಲ್ಲಾಯಲ್ಲಿನ ರಸ್ತೆ ಅಭಿವೃದ್ಧಿ ಸೇರಿದಂತೆ ನಾನಾ ಯೋಜನೆಗಳ ಜಾರಿ ಸಂಬಂಧ ನಾಳೆ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು. ಭೇಟಿ ವೇಳೆ ಜಿಲ್ಲಾಯಲ್ಲಿ ಆಗಬೇಕಾದ ಹಾಗೂ ಉಳಿದಿರುವ ಕಾಮಗಾರಿ ರಸ್ತೆ ಅಭಿವೃದ್ಧಿ ಕುರಿತಂತೆ ಪ್ರಮುಖವಾಗಿ ಚರ್ಚಿಸಲಾಗುವುದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನನ್ನೊಂದಿಗೆ ದೆಹಲಿ ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

Facebook Comments