ಸದ್ಯದಲ್ಲೇ ಲಂಚಕೋರರ ಬಣ್ಣ ಬಯಲು ಮಾಡ್ತೀನಿ : ಎಚ್.ಡಿ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಸೆ.15- ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳ ದಾಖಲೆಗಳನ್ನು ಶೀಘ್ರದಲ್ಲೇ ಬಯಲು ಮಾಡುತ್ತೇನೆ ಎಂದು ಮಾಜಿ ಸಚಿವ ಎಚ್. ಡಿ. ರೇವಣ್ಣ ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳು ಕೆಲವರ ಒತ್ತಡಕ್ಕೆ ಮಣಿದು ಕಾನೂನು ಬಾಹಿರ ಕೆಲಸಗಳನ್ನು ಮಾಡುತ್ತಿರುವ ದಾಖಲೆ ನನ್ನ ಬಳಿ ಇದೆ ಎಂದು ತಿಳಿಸಿದ್ದಾರೆ.

ಹಾಸನದ ಕೆಲವು ಇಲಾಖೆಗಳಲ್ಲಿ ಶಾಸಕರಿಗೆ 10 ರಿಂದ 12 ಪರ್ಸೆಂಟೇಜ್ ನೀಡಬೇಕು ಎಂದು ಕೆಲ ಅಕಾರಿಗಳು ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಾನು ಯಾವುದೇ ಅಕಾರಿಗಳಿಂದ ಹಣ ತೆಗೆದುಕೊಂಡಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಹಣ ಪಡೆದರೆ ಸುಮ್ಮನೆ ಬಿಡುವುದಿಲ್ಲ ಎಂದು ಅವರು ಹರಿಹಾಯ್ದರು.

ಕಂದಾಯ ಇಲಾಖೆ, ಜಿಲ್ಲಾಕಾರಿ ಕಚೇರಿ, ಜಿ.ಪಂ. ಸೇರಿದಂತೆ ನಾನಾ ಇಲಾಖೆಗಳ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕಾನೂನು ಬಾಹಿರ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಯಾರ್ಯಾರು ಎಷ್ಟೆಷ್ಟು ಲಂಚ ಪಡೆದಿದ್ದಾರೆ ಎಂಬ ದಾಖಲೆ ನನ್ನ ಬಳಿ ಇದೆ. ಇನ್ನು ಮುಂದಾದರೂ ಅಕಾರಿಗಳು ತಮ್ಮ ಧೋರಣೆ ಬದಲಿಸಿಕೊಂಡು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೇವಣ್ಣ ಎಚ್ಚರಿಸಿದರು.

ಜಮೀರ್ ಅಹಮದ್ ಜತೆ ಜೆಡಿಎಸ್ ಶಾಸಕರು ಶ್ರೀಲಂಕಾಗೆ ಹೋಗಿ ಬಂದ ವಿಚಾರವಾಗಿ ಮಾತನಾಡಿದ ಅವರು, ನನಗೆ ಹಾಸನ, ಹೊಳೆನರಸೀಪುರ, ಬೆಂಗಳೂರು ಯಾವುದಾದರೂ ಮೀಟಿಂಗ್ ಇದ್ದಾಗ ಹೋಗಿದ್ದೇನೆ.

ಈ ಪ್ರವಾಸದ ಬಗ್ಗೆ ನನಗೆ ಗೊತ್ತಿಲ್ಲ. ಕ್ಯಾಸಿನೋ ನಡೆಸುವವರು ಸರ್ಕಾರ ಉರುಳಿಸಿದ್ದು ಮುಗಿದು ಹೋದ ವಿಚಾರ ಎಂದರು.

Facebook Comments

Sri Raghav

Admin