ಯಾರ ಕಾಟ-ಮಾಟವೂ ನಡೆಯಲ್ಲ, 5 ವರ್ಷ ಮೈತ್ರಿ ಸರ್ಕಾರ ಸುಭದ್ರ : ಎಚ್.ಡಿ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ,ಏ.21- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಲೋಕಸಭಾ ಚುನಾವಣೆ ನಂತರ ಪತನವಾಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, 5 ವರ್ಷಗಳ ಕಾಲ ಮೈತ್ರಿ ಸರ್ಕಾರ ಸುಭದ್ರವಾಗಿರಲಿದ್ದು, ಯಾರ ಕಾಟವೂ ಇಲ್ಲ ಮಾಟವೂ ಇಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮೈತ್ರಿ ಸರ್ಕಾರ ಬಿದ್ದು ಹೋಗಲ್ಲ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಿದ್ದು ಹೋಗುತ್ತದೆ. ಬಿಜೆಪಿಯವರಿಗೆ ಮೋದಿ ಬಿಟ್ರೆ ಏನೂ ಇಲ್ಲ ಎಂದು ಟೀಕಿಸಿದರು.

ಬದಲಾವಣೆಯ ಗಾಳಿ ಬೀಸುತ್ತಿದ್ದು, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪಾತ್ರ ಪ್ರಮುಖವಾಗಿದ್ದು, ಅವರಿಗೆ ಶಕ್ತಿ ತುಂಬಬೇಕಿದೆ ಎಂದರು. ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯನವರ ಹೇಳಿಕೆ ಸಹಜವಾದುದ್ದು. ಅಧಿಕಾರದ ಆಸೆ ಎಲ್ಲರಿಗೂ ಇರುತ್ತದೆ.

ಅಧಿಕಾರ ಬೇಡ ಎನ್ನಲು ನಾವು ಸನ್ಯಾಸಿಗಳೂ ಅಲ್ಲ, ಶಾಪಗ್ರಸ್ಥರೂ ಅಲ್ಲ ಎಂದು ಸಮರ್ಥಿಸಿಕೊಂಡರು.  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅವರ ಪಕ್ಷದವರೇ ಸೋಲಿಸುತ್ತಾರೆ. ಇದನ್ನು ಡೈರಿಯಲ್ಲಿ ಬರೆದಿಟ್ಟುಕೊಳ್ಳಿ. ಅವರು ಯಾರೆಂದು ಸಮಯ ಬಂದಾಗ ಬಹಿರಂಗಪಡಿಸುವುದಾಗಿ ಮಾರ್ಮಿಕವಾಗಿ ನುಡಿದರು.

ಅಭಿವೃದ್ದಿ ವಿಚಾರದಲ್ಲಿ ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಡಿರುವ ಅಭಿವೃದ್ಧಿ ಏನು ಎಂಬುದನ್ನು ಪ್ರಧಾನಿ ನರೇಂದ್ರಮೋದಿ ಅವರಿಂದ ಹೇಳಿಸ್ತಾರಾ? ಎಂದು ಪ್ರಶ್ನಿಸಿದರು.

ವಿರೊಧ ಪಕ್ಷದವರನ್ನು ದಮನ ಮಾಡೋಕೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಆದಾಯ ತೆರಿಗೆ ಅಧಿಕಾರಿಗಳ ದಾಳಿ ಬಿಜೆಪಿಯವರ ಮೇಲೆ ನಡೆಯದಿರಲು ಅವರೇನು ಹಣವಿಲ್ಲದೆ ಪಾಪರ್ ಚೀಟಿ ತೆಗೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಹಾಸನದಲ್ಲಿ ಅಭ್ಯರ್ಥಿಯೇ ಇಲ್ಲ. ಬೇರೆ ಪಕ್ಷದವರನ್ನ ಕರೆದುಕೊಂಡು ಬಂದಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಇಲ್ಲದೆ ಹುಡುಕಿಕೊಂಡು ಹೋಗಿದ್ದರು ಎಂದು ವ್ಯಂಗ್ಯವಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin