“ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿಬಿಡಿ” : ಶಾಸಕರಲ್ಲಿ ರೇವಣ್ಣ ಕ್ಷೆಮೆಯಾಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.17-ಯಾವುದೇ ಶಾಸಕರ ಮನಸ್ಸಿಗೆ ನೋವುಂಟು ಮಾಡುವ ಕೆಲಸ ಮಾಡಿಲ್ಲ. ಹಾಗೇನಾದರು ನೋವುಂಟಾಗಿದ್ದರೆ ಕ್ಷಮೆ ಕೋರುವುದಾಗಿ ಲೋಕಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬೈಗೆ ಹೊದ ನಂತರ ಕೆಲವರು ತಮ್ಮ ಮೇಲೆ ಆರೋಪ ಮಾಡಿರಬಹುದು. ಆದರೆ ಯಾವುದೇ ಶಾಸಕರಿಗೂ ನೋವುಂಟು ಮಾಡುವ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನ ಶಾಸಕರೊಂದಿಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ಅವರನ್ನು ಕಡೆಗಣಿಸಿ ಯಾವ ತೀರ್ಮಾನ ಕೈಗೊಂಡಿಲ್ಲ ಎಂದರು. ತಾವು ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಸಂಬಂಧ ಚೆನ್ನಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಹೇಳುವುದನ್ನು ಮಾಡುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.

ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ದೇವರು ಕೊಟ್ಟ ಸರ್ಕಾರ. ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ಇರುತ್ತೇವೆ. ನಿಂಬೆ ಹಣ್ಣು ನನ್ನ ಬಳಿ ಇಲ್ಲ. ನಾನು ಏಕೆ ನಿಂಬೆಹಣ್ಣು ಇಟ್ಟುಕೊಳ್ಳಲ್ಲಿ. ನಮ್ಮ ಮನೆ ದೇವರು ಈಶ್ವರನ ಕೃಪೆ, ರಂಗನಾಥನ ಕೃಪೆ, ತಂದೆ-ತಾಯಿ ಆಶೀರ್ವಾದ ಇರುವವರೆಗೂ ಯಾವ ತೊಂದರೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮತ್ತೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರಿಗೆ ನೋವಾಗುವಂತ ಕೆಲಸವನ್ನು ಕುಮಾರಸ್ವಾಮಿ ಅವರು ಮಾಡುವುದಿಲ್ಲ. ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದರು.

ನಾಡಿನ ಜನರ ಪರವಾಗಿ ಮುಖ್ಯಮಂತ್ರಿ ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುರುವವರ ಮನವೊಲಿಸುವ ಕೆಲಸ ಮುಖ್ಯಮಂತ್ರಿಗೆ ಬಿಟ್ಟಿದ್ದು, ರಾಜಕೀಯ ವಿಚಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಗಮನ ಹರಿಸುತ್ತಾರೆ.

ನನಗೆ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಹೇಳಿದರು. ಹಾಸನ ವಿಚಾರ ಹಾಗೂ ತಮ್ಮ ಇಲಾಖೆ ಬಿಟ್ಟು ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ವರ್ಗಾವಣೆಗೂ ಕೈ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

 

Facebook Comments

Sri Raghav

Admin