ಸೆಪ್ಟಂಬರ್’ನಲ್ಲಿ ಬೆಂಗಳೂರು-ಮೈಸೂರು 10 ಪಥ ರಸ್ತೆ ಕಾಮಗಾರಿ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

revanna
ಬೆಂಗಳೂರು, ಜು.23- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಈ ತಿಂಗಳ ಅಂತ್ಯದೊಳಗೆ ಶೇ.80ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಳ್ಳಲಿದ್ದು, ಸೆಪ್ಟೆಂಬರ್‍ನಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಶೇ.63ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು 10 ದಿನಗಳಲ್ಲಿ ಶೇ. 17ರಷ್ಟು ಭೂ ಸ್ವಾಧೀನ ಪ್ರಕ್ರಿಯೆ  ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗುವುದು.

ಬೆಂಗಳೂರಿನಿಂದ ನಿಡಘಟ್ಟ ಹಾಗೂ ನಿಡಘಟದಿಂದ ಮೈಸೂರುವರೆಗೆ 6 ಪಥದ ರಸ್ತೆ ಇದಾಗಿದ್ದು,(ರಾ.ಹೆ.275) ಎರಡು ಪ್ಯಾಕೇಜ್ ಒಳಗೊಂಡಿದೆ ಎಂದು ಹೇಳಿದರು. ಬೆಂಗಳೂರು- ನಿಡಘಟ್ಟದವರೆಗೆ 54 ಕಿ.ಮೀ ರಸ್ತೆ ಅಭಿವೃದ್ಧಿಪಡಿಸಲು 2334 ಕೋಟಿ ರೂ, ನಿಡಘಟ್ಟದಿಂದ ಮೈಸೂರುವರೆಗೆ 61 ಕಿ.ಮೀ ರಸ್ತೆ ಅಭಿವೃದ್ದಿಪಡಿಸಲು 2685 ಕೋಟಿ ರೂ. ವೆಚ್ಚವಾಗಲಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin