ಕೇಂದ್ರ ಸಚಿವ ಗಡ್ಕರಿಯವರನ್ನು ಭೇಟಿ ಮಾಡಿದ ಹೆಚ್ಡಿಡಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ಇಂದು ದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವರು ನಿತಿನ್ ಗಡ್ಕರಿಯವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ಮಾಡಿ ಹಾಸನ ಜಿಲ್ಲೆಯಲ್ಲಿ ಹಾದು ಹೋಗುವ ಚನ್ನರಾಯಪಟ್ಟಣ- ಹೊಳೆನರಸೀಪುರ- ಅರಕಲಗೂಡು- ಮಡಿಕೇರಿ – ಮಾರ್ಕೋಟ – ಕೇರಳ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ನಾಲ್ಕು ಪಥದ ರಸ್ತೆಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದರು. ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಶೀಘ್ರದಲ್ಲೇ ಅನುಮೋದನೆ ನೀಡುವ ಭರವಸೆಯನ್ನು ಸಚಿವರು ನೀಡಿದರು.

ಹಾಸನ ಜಿಲ್ಲೆಯ ಮತ್ತೊಂದು ರಾಷ್ಟ್ರೀಯ ಹೆದ್ದಾರಿ ಹೊಳೆನರಸೀಪುರ ತಾಲ್ಲೂಕಿನ ಯಡಗೋಡನಹಳ್ಳಿ- ಬಿಳಿಕೆರೆ ಮತ್ತು ಹಾಸನ -ಬೇಲೂರು ಎರಡು ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಯಾಗಿ ಟೆಂಡರ್ ಕರೆಯಲು ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಹೆದ್ದಾರಿ ಸಚಿವರು ನಿತಿನ್ ಗಡ್ಕರಿಯವರು ಟೆಂಡರ್ ಕೆರಯಲು ಅನುಮೋದನೆ ನೀಡಿದರು. ಜೊತೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು , ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಇದ್ದರು

Facebook Comments

Sri Raghav

Admin