ನೆರೆಪೀಡಿತ ಉತ್ತರ ಕರ್ನಾಟಕ ಭಾಗದ ಜೆಡಿಎಸ್ ನಾಯಕರ ಜೊತೆ ಹೆಚ್ಡಿಕೆ-ಹೆಚ್‌ಡಿಡಿ ವಿಡಿಯೋ ಸಂವಾದ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.28-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನೇತ್ರತ್ವದಲ್ಲಿ ಉತ್ತರ ಕರ್ನಾಟಕ ಭಾಗದ ನೆರೆ ಹಾವಳಿಯಿಂದ ಉಂಟಾಗಿರುವ ಸಮಸ್ಯೆ, ಪರಿಹಾರ ಕಾರ್ಯಗಳ ಬಗ್ಗೆ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ‌ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಕೆ ಕುಮಾರಸ್ವಾಮಿಯವರು ಸಂವಾದದಲ್ಲಿ‌ ಭಾಗವಹಿಸಿದ್ದರು‌.

ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು.

ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಕೊರೊನಾದಂತಹ‌ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು.

Facebook Comments

Sri Raghav

Admin