ಹಿರಿಯ ನಿರ್ದೇಶಕ ರೇಣುಕಾ ಶರ್ಮಾ ನಿಧನಕ್ಕೆ ಕಂಬನಿ ಮಿಡಿದ ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ6-ಹಿರಿಯ ಚಿತ್ರ ನಿರ್ದೇಶಕ ರೇಣುಕಾಶರ್ಮ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌‌.ಡಿ. ಕುಮಾರಸ್ವಾಮಿ ತೀವ್ರ ಕಂಬನಿ ಮಿಡಿದಿದ್ದಾರೆ. ಕೋವಿಡ್ ನಿಂದಾಗಿ ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಜೀವ ತೆತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವರನಟ ಡಾ.ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅವರ ಅತ್ಯಂತ ಯಶಸ್ವಿ ಚಿತ್ರವಾಗಿತ್ತು. ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಭರ್ಜರಿ ಗಂಡು, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.

ಅವರ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

Facebook Comments

Sri Raghav

Admin