ಹೊಸ ಸಿಎಂ ಬೊಮ್ಮಾಯಿಗೆ ಶುಭ ಕೋರಿದ ಎಚ್‌ಡಿಕೆ- ಎಚ್‌ಡಿಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.28-ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಪ್ರಧಾನಿ ಎಚ್. .ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಸಿಕ್ಕ ಈ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತವನ್ನು ನೂತನ ಸಿಎಂ ನೀಡುತ್ತಾರೆಂದು ದೇವೇಗೌಡರು ಆಶಿಸಿದ್ದಾರೆ.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿರುವ ಕುಮಾರಸ್ವಾಮಿ, ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುತ್ತಾರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ಅವರಿಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ಅವರು ಗಮನ ಹರಿಸುತ್ತಾರೆ ಎಂದು ಭಾವಿಸುವುದಾಗಿ ಹೆಚ್ಡಿಕೆ ಟ್ವೀಟ್ ಮೂಲಕ ತಿಳಿಸಿದ್ದಾರೆ.

Facebook Comments