ಬಿಗ್ ನ್ಯೂಸ್ : ಬಿಎಸ್‌ವೈ ಭೇಟಿಯಾದ ಹೆಚ್ಡಿಕೆ..! ಕಾರಣವೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.11- ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇಂದು ಭೇಟಿಯಾಗಿದ್ದಾರೆ. ಮೈತ್ರಿ ಸರ್ಕಾರ ಪತನಗೊಂಡು ಒಂದು ವರ್ಷವಾದ ಬಳಿಕ ಇದೇ ಮೊದಲ ಬಾರಿಗೆ ಎಚ್‍ಡಿಕೆ, ಬಿಎಸ್‍ವೈ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.

ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಮ್ಮ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಹೊರಗೆ ಕಳುಹಿಸಿ ಸುಮಾರು 25ರಿಂದ 35 ನಿಮಿಷಗಳ ಕಾಲ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿರುವುದು ರಾಜಕೀಯ ವಲದಯಲ್ಲಿ ಸಂಚಲನ ಮೂಡಿಸಿದೆ.

ಈಗಾಗಲೇ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ದೆಹಲಿ ಭೇಟಿ ನೀಡಿರುವುದರಿಂದ ಬಿಜೆಪಿ ಪಾಳೆಯದಲ್ಲಿ ಹಲವಾರು ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇದರ ನಡುವೆಯೇ ಕುಮಾರಸ್ವಾಮಿಯವರ ಭೇಟಿ ಅಚ್ಚರಿ ಮೂಡಿಸಿದೆ. ಸಿಎಂ ಅವರ ಅಕೃತ ಕಾರ್ಯಕ್ರಮದಲ್ಲಿ ಯಾವುದೇ ನಾಯಕರ ಭೇಟಿಯ ಬಗ್ಗೆ ಮಾಹಿತಿ ಇರಲಿಲ್ಲ. ಮತ್ತು ಸಿಬ್ಬಂದಿಗಳು ಕೂಡ ವಿರಳವಾಗಿದ್ದರು ಎಂದು ಹೇಳಲಾಗುತ್ತಿದೆ.

ಕಳೆದ ಜನವರಿಯಲ್ಲಿ ಉತ್ತರ ಕರ್ನಾಟಕದ ಕೆಲ ಶಾಸಕರು, ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು ಆಗ ಭಾರೀ ಸುದ್ದಿಗಯಾಗಿತ್ತು. ನಾಯಕತ್ವ ಬದಲಾವಣೆಯ ಗುಸುಗುಸು ಶುರುವಾಗಿತ್ತು. ಆದರೂ ಸಹ ಹೈಕಮಾಂಡ್ ಮಟ್ಟದಲ್ಲಿ ಯಡಿಯೂರಪ್ಪ ಅವರು ತಮ್ಮ ಪ್ರಭಾವ ಬಳಸಿ ಅದನ್ನು ತಣ್ಣಗಾಗಿಸುವಲ್ಲಿ ಯಶಸ್ವಿಯಾಗಿದ್ದರು.

ಇದರ ನಡುವೆ ಕೋವಿಡ್ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಕೇಂದ್ರ ವರಿಷ್ಠರು ಕೂಡ ಅಷ್ಟಾಗಿ ಇದರ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಸಿಎಂ ಪುತ್ರ ವಿಜಯೇಂದ್ರ ಸೇರಿದಂತೆ ಹಲವರ ಬಗ್ಗೆ ದೂರುಗಳು ಹೈಕಮಾಂಡ್‍ಗೆ ತಲುಪಿದೆ. ಈ ಎಲ್ಲದರ ಬಗ್ಗೆ ಅಮಿತ್ ಷಾ ಕೂಡ ತಾಳ್ಮೆಯಿಂದ ಪರಿಶೀಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಕಾರ್ಯ ವೈಖರಿ ಬಗ್ಗೆ ವಿಪಕ್ಷಗಳು ದನಿ ಎತ್ತುತ್ತಿರುವುದು ಮತ್ತು ಪಕ್ಷದ ವರ್ಚಸ್ಸು ಕುಂದುತ್ತಿರುವ ಕುರಿತು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಹಲವು ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿರುವ ಕೆಲ ಬಿಜೆಪಿ ರಾಷ್ಟ್ರೀಯ ನಾಯಕರು ಎಲ್ಲೂ ಕೂಡ ಸದ್ಯದ ಬೆಳವಣಿಗೆಗಳ ಬಗ್ಗೆ ತುಟಿ ಬಿಚ್ಚಿರಲಿಲ್ಲ. ಆದರೆ ಮತ್ತೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಾರಂಭಿಸಿದ್ದು, ಇದರಲ್ಲಿ ಯಾರ್ಯಾರು ಸಿಲುಕುತ್ತಾರೆ ಎಂಬುದು ಕೂತಹಲ ಕೆರಳಿಸಿದೆ.

ಇದೆಲ್ಲ ಏನೇ ಇದ್ದರೂ ಸದ್ಯದ ಮಟ್ಟಿಗೆ ಹೊಸ ಪ್ರಯೋಗಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಸೌಹಾರ್ದಯುತ ಭೇಟಿ: ಕಳೆದ ಕೆಲವು ದಿನಗಳಿಂದ ಮಳೆಯಿಂದಾಗಿ ಹೆಚ್ಚು ಹಾನಿ ಉಂಟಾಗುತ್ತಿದೆ. ವಿಶೇಷವಾಗಿ ನಮ್ಮ ದಾಸರಹಳ್ಳಿ ಶಾಸಕ ಮಂಜುನಾಥ್ ಕ್ಷೇತ್ರದಲ್ಲಿ ಬಹಳ ಹಾನಿ ಆಗಿತ್ತು.

ನಾನು ಸಿಎಂ ಆಗಿದ್ದಾಗ ಅನುದಾನ ಕೊಟ್ಟಿದ್ದೆ. ಅದು ಬಿಡುಗಡೆ ಆಗಿರಲಿಲ್ಲ. ಅದರ ಬಗ್ಗೆ ಮನವಿ ಮಾಡಲು ಬಂದಿದ್ದೆ ಎಂದು ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ತಿಳಿಸಿದ್ದಾರೆ. ಶಾಸಕರ ಅನುದಾನದಲ್ಲೂ ತಾರತಮ್ಯವಾಗುತ್ತಿದೆ. ಇದರ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆಯೂ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಕುಮಾರಸ್ವಾಮಿ ಸಸತಿಳಿಸಿದ್ದಾರೆ.

ಇದೇ ವೇಳೆ ಶಾಸಕ ಮಂಜುನಾಥ್ ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಹಣ ಬಿಡುಗಡೆ ಮಾಡಿದ್ದರು. ಆದರೆ ಸರ್ಕಾರ ಬದಲಾವಣೆ ನಂತರ ಅನುದಾನ ಬಿಡುಗಡೆಯಲ್ಲಿ ತೊಂದರೆಯಾಯಿತು.

ಪೀಣ್ಯ ಕೈಗಾರಿಕಾ ಪ್ರದೇಶ ನಮ್ಮ ಕ್ಷೇತ್ರಕ್ಕೆ ಬರಲಿದೆ. ಅಲ್ಲೂ ಕೂಡ ಮಳೆಯಿಂದ ಸಮಸ್ಯೆಯಾಗಿದೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಎಚ್‍ಡಿಕೆ ಅವರೊಂದಿಗೆ ಇಲ್ಲಿಗೆ ಬಂದಿದ್ದಾಗಿ ತಿಳಿಸಿದರು.

Facebook Comments

Sri Raghav

Admin