ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲೋದು ಗ್ಯಾರಂಟಿ : ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.30- ಶಿರಾ ಮತ್ತು ರಾಜರಾಜೇಶ್ವರಿನಗರ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸಲಿದೆ ಎಂದು ಹೇಳಿದ್ದಾರೆ.

ಶಿರಾ ನಾವು ಗೆದ್ದ ಕ್ಷೇತ್ರವೂ ಹೌದು, ಆಪರೇಷನ್ ಕಮಲ ಮೆಟ್ಟಿ ಉಳಿಸಿಕೊಂಡ ಕ್ಷೇತ್ರವೂ ಹೌದು. ಸತ್ಯಣ್ಣ ಇಲ್ಲಿ ಗೆದ್ದಿದ್ದರು. ಬಿಜೆಪಿಯವರ ಆಮಿಷಕ್ಕೆ ಆಕರ್ಷಿತರಾಗದೇ ಕ್ಷೇತ್ರವನ್ನು ಜೆಡಿಎಸ್‍ಗೆ ಉಳಿಸಿಕೊಟ್ಟಿದ್ದರು. ಸತ್ಯಣ್ಣ ಇದ್ದಿದ್ದರೆ ಈ ಕ್ಷೇತ್ರ ನಮ್ಮಲ್ಲೇ ಇರುತ್ತಿತ್ತು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರ ಎಂದಿದ್ದಾರೆ.

ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ.

ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವು ಇಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ ಎಂದು ಭಾವನಾತ್ಮಕವಾಗಿ ಟ್ವಿಟ್ ಮಾಡಿದ್ದಾರೆ.

Facebook Comments

Sri Raghav

Admin