ಸ್ಫೋಟ ಪ್ರಕರಣ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು : ಎಚ್‍ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.23- ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸೋಟ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಸೋಟ ಪ್ರಕರಣದಲ್ಲೂ ಆರು ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮತ್ತೊಂದು ದುರ್ಘಟನೆ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸಮಯಕ್ಕೆ ತಕ್ಕ ಉತ್ತರ ಕೊಟ್ಟರೆ ಸಾಲದು.

ಅಕ್ರಮ ಗಣಿಗಾರಿಕೆ ತಡೆಯಲು ಕಠಿಣ ಕ್ರಮ ಅಗತ್ಯ ಎಂದು ಹೇಳಿದರು.ಸರ್ಕಾರದ ಅಧಿಕಾರಿಗಳು ಕಾನೂನನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ಗಣಿಗಾರಿಕೆಯಿಂದ ಚಂದಾ ವಸೂಲಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ ಎಂದರು.

ಗಣಿ ಸಚಿವರು ನಿನ್ನೆ ಮಂಡ್ಯದಲ್ಲಿ ಸ್ಥಳ ಪರಿಶೀಲನೆ ಮಾಡಿ ಬಂದಿದ್ದಾರೆ. ಅಲ್ಲಿ ಏನೇನು ನಡೆಯುತ್ತಿದೆ ಎಂಬುದರ ಬಗ್ಗೆ ತಮಗೆ ಮಾಹಿತಿ ಇದೆ. ಜನರು ಕೂಡ ಹಣ ಸಂಪಾದನೆ ಮಾಡುವವರನ್ನು ಮೆಚ್ಚುತ್ತಾರೆಯೇ ಹೊರತು ಪ್ರಾಮಾಣಿಕರನ್ನು ಪೋಷಿಸುವುದಿಲ್ಲ ಎಂದು ಹೇಳಿದರು.

ಬಿಜಾಪುರ ಜಿಲ್ಲೆಯಲ್ಲಿ ಅಮಾಯಕರನ್ನು ಬಂಸಲಾಗಿದೆ. ಇಂತಹ ಗಣಿಗಾರಿಕೆಯಿಂದ ಅಮಾಯಕರ ಬಲಿಯಾಗುತ್ತಿದೆಯೇ ಹೊರತು ಜನಸಾಮಾನ್ಯರ ರಕ್ಷಣೆಯಾಗುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ನಂತರ ಇಂತಹ ಘಟನೆ ಸಂಭವಿಸಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ಜಿಲೆಟಿನ್ ಬಳಕೆ ಬಗ್ಗೆ ಮುನ್ನೆಚ್ಚರಿಕೆ ಕೈಗೊಂಡಿದ್ದರೆ ಇಂತಹ ದುರ್ಘಟನೆ ನಡೆಯುತ್ತಿತ್ತೆ ಎಂದು ಪ್ರಶ್ನಿಸಿದರು.

ಸರ್ಕಾರದ ಬಗ್ಗೆ ಜನರಲ್ಲಿ ಅಸಹ್ಯ ಭಾವನೆ ಉಂಟಾಗಿದ್ದು, ಮಂತ್ರಿಗಳು ನೀಡುವ ಹೇಳಿಕೆಗಳಿಂದ ಇಂತಹ ಘಟನೆ ನಿಲ್ಲುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೀಸಲಾತಿಗೆ ಸಂಬಂಸಿದಂತೆ ಸಮಾಜದಲ್ಲಿ ಒಡಕು, ಸಂಘರ್ಷ ಉಂಟಾಗುವ ಮುನ್ನ ಸರ್ಕಾರ ಎಚ್ಚೆತ್ತುಕೊಂಡು ವಾಸ್ತವಾಂಶದ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.

Facebook Comments

Sri Raghav

Admin