ಬಿಜೆಪಿ ಹಗಲುಗನಸು ಕಾಣುತ್ತಿದೆ: ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಏ.24-ಲೋಕಸಭೆ ಚುನಾವಣೆ ಮುಗಿಯುವ ಮುನ್ನವೇ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 23 ರಂದು ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಬಿಜೆಪಿಗೆ ಮತ್ತೊಮ್ಮೆ ಆತಂಕ ಕಾದಿದೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ನೋಡಿ ನಾವು ರಾಜಕೀಯ ಕಲಿಯಬೇಕಿಲ್ಲ. ಇಂಥವರಿಂದ ನಾವು ರಾಜಕೀಯ ಕಲಿತಿಲ್ಲ ಎಂದು ತಿರುಗೇಟು ನೀಡಿದರು.

ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ ನೀಡಲಿ, ತಮ್ಮದೇನೂ ಅಭ್ಯಂತರವಿಲ್ಲ ಎಂದು ಹೇಳಿದರು.
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ತುಮಕೂರು, ಹಾಸನ, ಮಂಡ್ಯ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್‍ಗೆ ಗೆಲುವು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯ ನಂತರವೂ ನಾಲ್ಕು ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ. ಚುನಾವಣಾ ಫಲಿತಾಂಶದ ನಂತರವೂ ಅಚ್ಚರಿ ಕಾದಿದೆ ಎಂದ ಅವರು, ಮೈತ್ರಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಹಿಂದಿನ ಸರ್ಕಾರದ ಯೋಜನೆಗಳನ್ನು ಮುಂದುವರೆಸಿರುವುದಲ್ಲದೆ, ಅನೇಕ ಜನಪರ ಯೋಜನೆಗಳನ್ನೂ ಕೂಡ ಜಾರಿಗೆ ತಂದಿದ್ದೇವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ