ಪ್ರತ್ಯೇಕತೆಯ ಕೂಗಿನವರನ್ನು ಸಮಾಧಾನಿಸಿದ್ದಕ್ಕೆ ನನ್ನನ್ನೇ ಟೀಕಿಸಿದರು : ದೇವೇಗೌಡರ ವಿರುದ್ಧ ಬಿಎಸ್’ವೈ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

BJP-Yadi
ಬೆಂಗಳೂರು, ಆ.4-ರಾಜ್ಯದಲ್ಲಿ ಪ್ರತ್ಯೇಕತೆ ಕೂಗಿನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದಾಗ ಸ್ವತಃ ನಾನು ಅಲ್ಲಿಗೆ ಹೋಗಿ ಪ್ರತಿಭಟನಾಕಾರರಿಗೆ ಮನವಿ ಮಾಡಿದೆ. ಆದರೆ ಅದಕ್ಕೆ ಪ್ರತಿಯಾಗಿ ದೇವೇಗೌಡರು ನನ್ನನ್ನೇ ಟೀಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಕ್ಷೇಪಿಸಿದರು.

ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನನಗೆ ಗೌರವವಿದೆ. ಆದರೆ ಮುಖ್ಯಮಂತ್ರಿಯಾಗಿ ಅವರ ಮಗ ಕುಮಾರಸ್ವಾಮಿಯವರು ಅಲ್ಲಿಗೆ ಹೋಗಿ ಸ್ವಾಮೀಜಿಗಳ ಮನವೊಲಿಸಬೇಕಿತ್ತು. ಆದರೆ ನಾನು ರಾಜ್ಯ ಒಡೆಯದಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದೇನೆ. ಇದಕ್ಕೆ ಪ್ರತಿಯಾಗಿ ನನ್ನನ್ನೇ ಟೀಕಿಸಿದ್ದಾರೆ ಎಂದರು. ಅದಕ್ಕೆ ನಾನು ಅವರಿಗೆ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಮೂರು ಪ್ರಶ್ನೆಗಳನ್ನು ಕೇಳಿದ್ದೇನೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಾಗಲಿ ಅಥವಾ ದೇವೇಗೌಡರಾಗಲಿ ಉತ್ತರಿಸಿಲ್ಲ ಎಂದು ಹೇಳಿದರು.

ಬೆಂಗಳೂರಿನ ಜನತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒತ್ತುವರಿಯಾಗಿರುವ ಕೆರೆಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಬೆಂಗಳೂರಿನ ಬಿಜೆಪಿ ಶಾಸಕರು ಹಾಗೂ ಬಿಬಿಎಂಪಿ ಸದಸ್ಯರು ಹೋರಾಟ ಹಮ್ಮಿಕೊಳ್ಳಬೇಕು ಎಂದು  ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು. ವಿಧಾನಸಭೆ ಚುನಾವಣೆಯಲ್ಲಿ ನಮಗೆ ಆದ ಹಿನ್ನಡೆ ಮರು ಕಳಿಸಬಾರದು. ಪಕ್ಷ ಸಂಘಟನೆಗೆ ಕೆಲಸ ಮಾಡದ ಬಿಬಿಎಂಪಿ ಸದಸ್ಯರಿಗೆ ಯಾವುದೇ ಕಾರಣಕ್ಕೂ ಮತ್ತೆ ಕೊಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು. ಬೆಂಗಳೂರಿನ ಶಾಸಕರು ಹಾಗೂ ಬಿಬಿಎಂಪಿ ಸದಸ್ಯರು ಏನು ಮಾಡುತ್ತಿದ್ದಾರೆ. ಪಕ್ಷ ಸಂಘಟನೆಗೆ ಅವರ ಕೊಡುಗೆ ಏನು? ಎಂಬ ಬಗ್ಗೆ ಚರ್ಚೆಯಾಗಬೇಕು. ಜನರ ಆಶೋತ್ತರಗಳಿಗೆ ಸ್ಥಳೀಯ ಮುಖಂಡರಾಗಿ ಆಸ್ಥೆ ವಹಿಸಿ ಕೆಲಸ ಮಾಡಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

Facebook Comments

Sri Raghav

Admin