ಆರೋಗ್ಯ ಇಲಾಖೆಯ ಸಿಬ್ಬಂದಿಗೆ ರಜೆ ಇಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.13- ರಾಜ್ಯದಲ್ಲಿ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎರಡನೆ ಶನಿವಾರ ಮತ್ತು ಭಾನುವಾರಗಳಂದು ಎಲ್ಲ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಕೊರೊನಾ ವೈರಾಣು ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಅನೇಕ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ವೈರಾಣು ನಿಯಂತ್ರಣಕ್ಕೆ ಬರುವವರೆಗೂ ಎರಡನೆ ಶನಿವಾರ, ಭಾನುವಾರ ಸೇರಿದಂತೆ ಎಲ್ಲ ಸಾರ್ವತ್ರಿಕ ರಜಾ ದಿನಗಳಂದು ಆರೋಗ್ಯ ಇಲಾಖೆ ಅಧೀನದಲ್ಲಿ ಬರುವ ಎಲ್ಲ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಕಚೇರಿ ಸಿಬ್ಬಂದಿ, ಅರೆವೈದ್ಯಕೀಯ ಸಿಬ್ಬಂದಿ, ಎಲ್ಲ ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಪರಿಸ್ಥಿತಿ ಸುಧಾರಿಸುವವರೆಗೂ ಆಸ್ಪತ್ರೆಗಳ ಕಚೇರಿ ಮುಖ್ಯಸ್ಥರು ಯಾವುದೇ ವೈದ್ಯರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಸೂಚಿಸಿದ್ದಾರೆ. ಅಲ್ಲದೆ, ಈಗಾಗಲೇ ರಜೆ ಮೇಲೆ ತೆರಳಿರುವವರನ್ನು ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

Facebook Comments