ಹೆಲ್ತ್ ಮಿನಿಸ್ಟರ್ ಶ್ರೀರಾಮುಲುಗೂ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು-ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪರಿಣಾಮ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

”ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.

ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ” ಎಂದು ರಾಮುಲು ಟ್ವೀಟ್ ಮಾಡಿದ್ದಾರೆ‌.

”ಆದಷ್ಟು ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಕೋವಿಡ್ ಸೋಂಕು ದೃಢವಾಗಿದ್ದು, ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾರ್ವಜನಿಕರ ಮೆಚ್ಚುಗೆ

ಕೋವಿಡ್ ಸೋಂಕು ದೃಢಪಟ್ಟಿರುವ ಆರೋಗ್ಯ ಸಚಿವರು ಚಿಕಿತ್ಸೆಗೆ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಸಿಎಂ ಯಡಿಯೂರಪ್ಪ ಆದಿಯಾಗಿ ಹಲವಾರು
ಸರಕಾರಿ ಆಸ್ಪತ್ರೆಗಳ ಬದಲಾಗಿ ಖಾಸಗಿ ಚಿಕಿತ್ಸಾಲಯಗಳನ್ನು ಆಯ್ದುಕೊಂಡರೇ ಸಚಿವ ಶ್ರೀರಾಮುಲು ಅವರು ಈ ತದ್ವಿರುದ್ಧ ನಡೆಗೆ ಹಲವಾರು ಭೇಷ್ ಎಂದಿದ್ದಾರೆ.

Facebook Comments

Sri Raghav

Admin