ಇಂದು ಮತ್ತು ನಾಳೆ ಕೂಡ ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 8- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಮತ್ತು ನಾಳೆ ಕೂಡ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎ.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.

ವಾತಾವರಣದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾದ ವರದಿಯಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾಗಶಃ ವ್ಯಾಪಕ ಮಳೆಯಾಗಿದೆ. ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ.

ವಾತಾವರಣದಲ್ಲಿ ಟ್ರಪ್ ನಿರ್ಮಾಣವಾಗಿದ್ದು, ಬಿಸಿಲು ಹೆಚ್ಚಾದ ಕಾರಣ ಗುಡುಗು- ಮಿಂಚಿನ ಸನ್ನಿವೇಶ ಸೃಷ್ಟಿಯಾಗಿ ಹಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಚದುರಿದಂತೆ ಸಾಧಾರಣ ಮಳೆ ಮುಂದುವರಿ ಯುವ ಸಾಧ್ಯತೆಗಳಿವೆ ಎಂದು ಹೇಳಿದರು.

Facebook Comments