ಕರಾವಳಿ ಭಾಗದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ, ಜು.17-ಮಲೆನಾಡು, ಕೊಡಗು, ಕರಾವಳಿ ಭಾಗಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಜನತೆ ಹಾಗೂ ಪ್ರವಾಸಿಗರು ಎಚ್ಚರದಿಂದಿರಬೇಕು ಎಂದು ಸೂಚಿಸಲಾಗಿದೆ.

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಬೀಳುತ್ತಿರುವ ಮಳೆ ಇನ್ನೂ ಹೆಚ್ಚಾಗಬಹುದು. ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿ ತುರ್ತು ಪರಿಸ್ಥಿತಿ ವೇಳೆ ಸಂಪರ್ಕಿಸಲು ಹೆಲ್ಪ್‍ಲೈನ್ ಕೇಂದ್ರವನ್ನು ಕೂಡ ತೆರೆದಿದೆ.

ಕೇಂದ್ರ ಹವಾಮಾನ ಇಲಾಖೆ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಒಂದು ವಾರದಲ್ಲಿ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಕರಾವಳಿ ಸೇರಿ ಮಲೆನಾಡಿನ ಹಲವು ನದಿಗಳು ಮೈದುಂಬಿ ಹರಿಯುತ್ತಿವೆ.

Facebook Comments