ಬೆಂಗಳೂರಲ್ಲಿ ಮಳೆ ರಗಳೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 27- ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ರಾಜಧಾನಿ ನಲುಗಿ ಹೋಗಿದೆ. ನಗರದ ಬಹುತೇಕ ಪ್ರದೇಶದಲ್ಲಿ ಬೃಹತ್ ಮರಗಳು ಧರೆಗುರುಳಿದ ಪರಿಣಾಮ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸದಾಶಿವನಗರ, ಮಲ್ಲೇಶ್ವರಂ, ರಾಜಾಜಿನಗರ, ಹಂಪಿನಗರ, ಹೊಸಳ್ಳಿ, ವಿಜಯನಗರ, ಮಹಾಲಕ್ಷ್ಮೀಲೇಔಟ್, ಕೆ.ಆರ್.ಮಾರುಕಟ್ಟೆ, ಗಾಂಧಿನಗರ, ಕೋರಮಂಗಲ ಸೇರಿದಂತೆ ಬಹಳಷ್ಟು ಬಡಾವಣೆಗಳಲ್ಲಿ ದೊಡ್ಡ ದೊಡ್ಡ ಮರಗಳು ಬಿದ್ದಿವೆ.

ಕೆಲವು ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿದ ಪರಿಣಾಮ ವಿದ್ಯುತ್‍ಕಂಬಗಳೂ ಧರೆಗುರುಳಿವೆ. ಹಾಗಾಗಿ ಬಹುತೇಕ ಪ್ರದೇಶಗಳಲ್ಲಿ ಇಡೀ ರಾತ್ರಿ ವಿದ್ಯುತ್ ಇಲ್ಲದೆ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಯಿತು. ಕೆಲವೆಡೆ ಮನೆಗಳ ಮೇಲೆ ಬೃಹತ್ ಮರಗಳು ಉರುಳಿ ಮನೆಗಳೂ ಜಖಂಗೊಂಡಿರುವ ಪ್ರಕರಣಗಳು ದಾಖಲಾಗಿವೆ.

ಇದೇ ರೀತಿ ಇನ್ನೂ ಹಲವೆಡೆ ಮರಗಳು ದ್ವಿಚಕ್ರ ವಾಹನಗಳ ಮೇಲೆ ಬಿದ್ದ ಪರಿಣಾಮ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಟ್ಟಾರೆ ರಾತ್ರಿ ಸುರಿದ ಮಳೆ ನಗರವನ್ನು ಚಿತ್ ಮಾಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin