ಮಹಾರಾಷ್ಟ್ರ, ಗುಜರಾತ್, ಗೋವಾದಲ್ಲಿ ಭಾರೀ ಮಳೆ ಸಾಧ್ಯತೆ :  ಐಎಂಡಿ ಮುನ್ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ/ಅಹಮದಾಬಾದ್/ಪಣಜಿ, ಸೆ.19(ಪಿಟಿಐ)- ದಕ್ಷಿಣ ಭಾರತ ಮತ್ತು ಉತ್ತರ ಭಾರತದಲ್ಲಿ ಭಾರೀ ಜಲ ಸಂಕಷ್ಟ ಉಂಟುಮಾಡಿದ್ದ ವರುಣನ ಆರ್ಭಟ ಮಹಾರಾಷ್ಟ್ರ, ಗುಜರಾತ್ ಮತ್ತು ಗೋವಾ ರಾಜ್ಯಗಳಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಮೂರು ರಾಜ್ಯಗಳ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಂಭವಿಸಲಿದೆ ಎಂದು ಐಎಂಡಿ ಕಟ್ಟೆಚ್ಚರ ನೀಡಿದೆ. ಈ ಹಿನ್ನೆಲೆಯಲ್ಲಿ ಎದುರಾಗಬಹುದಾದ ಪರಿಸ್ಥಿತಿ ನಿಭಾಯಿಸಲು ರಕ್ಷಣಾ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧೆಡೆ ಈಗಾಗಲೇ ಭಾರೀ ಮಳೆ ಸುರಿಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡು ಜನಜೀವನ ಏರುಪೇರಾಗಿದೆ.

ಗುಜರಾತ್ ಮತ್ತು ಗೋವಾದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ರೆಡ್ ಅಲಟ್‍ರ ಘೋಷಿಸಲಾಗಿದೆ. ಕೆಲವೆಡೆ ಈಗಾಗಲೇ ಮಳೆಯ ಆರ್ಭಟ ಆರಂಭವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ದಳಗಳು ಸಂಭವಿಸಬಹುದಾದ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ