ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ ರೆಡ್‍ ಅಲರ್ಟ್ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಕೊಡುಗು,ಜು.20- ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೊಡಗಿನಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಜು.23ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಈಗಾಗಲೇ ಜು.18ರಿಂದ 20ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು ಈ ನಡುವೆ ಇಂದಿನಿಂದ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದ್ದು, ಸಾರ್ವ ಜನಿಕರು ಹಾಗೂ ಪ್ರವಾಸಿಗರು ಎಚ್ಚರದಿಂದ ಇರಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಸುಮಾರು 204.5 ಮೀಟರ್ ಮಳೆಯಾಗುವ ಸಾಧ್ಯತೆ ಇದೆ ನದಿ ಪ್ರದೇಶದತ್ತ ಯಾರೂ ಹೋಗಬಾರದು. ಗುಡ್ಡ ಹಾಗೂ ಮಣ್ಣು ಕುಸಿಯುವ ಸಾಧ್ಯತೆ ಇರುವ ಕಡೆ ಜನ, ವಸತಿಯನ್ನು ತಕ್ಷಣ ಬೇರೆಡೆ ಸ್ಥಳಾಂತರಿಸಬೇಕೆಂದು ಅನೀಸ್ ಕಣ್ಮನಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಪ್ರಾಕೃತಿಕ ವಿಕೋಪ ಸಂಭವಿಸದಲ್ಲಿ ತಕ್ಷಣ ಪರಿಹಾರ ಒದಿಗಸಲು ಸಹಾಯ ವಾಣಿಯನ್ನು ಪ್ರಾರಂಭಿಸಲಾಗಿದ್ದು, ಅಗತ್ಯಬಿದ್ದಲ್ಲಿ ಸಹಾಯವಾಣಿ 0872-2221077ಗೆ ಕರೆ ಮಾಡಬಹುದೆಂದು ತಿಳಿಸಲಾಗಿದೆ.

Facebook Comments