ಮುಂಬೈನಲ್ಲಿ ಭಾರೀ ಮಳೆ, ಅಪಘಾತಗಳಲ್ಲಿ ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಜು.24 (ಪಿಟಿಐ)- ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಬಿಡುವು ನೀಡಿದ್ದ ಕುಂಭದ್ರೋಣ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂಬೈ ಮತ್ತು ಉಪನಗರಗಳಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹಾನಗರದ ವಿವಿಧೆಡೆ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮುಂಜÁನೆಯೇ ಮುಸಲಧಾರೆಯಿಂದ ಶಾಲಾ-ಕಾಲೇಜುಗಳಿಗೆ ತೆರಳಬೇಕಾದ ವಿದ್ಯಾರ್ಥಿಗಳು ಮತ್ತು ದೈನಂದಿನ ಕೆಲಸ-ಕಾರ್ಯಗಳಿಗೆ ಹಾಜರಾಗಬೇಕಿದ್ದ ಉದ್ಯೋಗಿಗಳು ತೀವ್ರ ತೊಂದರೆ ಅನುಭವಿಸಿದರು.

ಅಂಧೇರಿ, ಸೊಯಿನ್ ಸೇರಿದಂತೆ ಬಹುತೇಕ ಪ್ರದೇಶಗಳ ರಸ್ತೆಗಳು ಜಲಾವೃತವಾಗಿದ್ದು, ಜನರು ಕೆರೆಯಂತಾದ ರಸ್ತೆಗಳ ಮೇಲೆ ಪ್ರಯಾಸದಿಂದ ತಮ್ಮ ವಾಹನಗಳನ್ನು ಚಲಿಸುತ್ತಾ ಸಾಗಬೇಕಾಯಿತು. ಈ ಸಂದರ್ಭದಲ್ಲಿ ಅಪಘಾತಗಳು ಸಂಭವಿಸಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ವಾಹನಗಳು ಜಖಂಗೊಂಡಿವೆ.

ಮಳೆ ಕಾರಣ ಸಬ್‍ಅರ್ಬನ್ ರೈಲುಗಳ ಸಂಚಾರ ವಿಳಂಬವಾಗಿ ಪ್ರಯಾಣಿಕರು ಪರದಾಡುವಂತಾಯಿತು. ಪಾದಚಾರಿಗಳು ಮೊಣಕಾಲು ಎತ್ತರಎಷ್ಟು ನಿಂತಿದ್ದ ನೀರಿನಲ್ಲಿ ನಡೆದು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.  ಇನ್ನೂ ಒಂದೆರಡು ದಿನಗಳ ಕಾಲ ಮುಂಬೈ ಮಹಾನಗರಿಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ