ಭಾರತ ಪ್ರಧಾನಿ ಕೈಯಲ್ಲಿ ಸುರಕ್ಷಿತವಾಗಿದೆ : ಹೇಮಾಮಾಲಿನಿ

ಈ ಸುದ್ದಿಯನ್ನು ಶೇರ್ ಮಾಡಿ

ಚಂಡಿಗಡ, ಅ.19- ಭಾರತ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಪ್ರಧಾನಿ ನರೇಂದ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ ಎಂದು ಖ್ಯಾತ ಅಭಿನೇತ್ರಿ ಮತ್ತು ಬಿಜೆಪಿ ಸಂಸದೆ ಹೇಮಾಮಾಲಿನಿ ಗುಣಗಾನ ಮಾಡಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಹೇಮಮಾಲಿನಿ, ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಸ್ವಚ್ಛ ಮತ್ತು ಪಾರದರ್ಶಕ ಆಡಳಿತವನ್ನು ಒದಗಿಸಿದೆ ಹಾಗೂ ಅರ್ಹತೆಯ ಮೇಲೆ ಉದ್ಯೋಗಗಳನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 21ರಂದು ನಡೆಯುವ ಹರ್ಯಾಣ ವಿಧಾನಸಭೆ ಚುನಾವಣೆಗಾಗಿ ಪಲ್ವಾಲ್ ಮತ್ತು ಮಹೇಂದ್ರ ಗಢದಲ್ಲಿ ಹೇಮಾಮಾಲಿನ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

Facebook Comments