600 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.19- ಬೆಳ್ಳಂಬೆಳಗ್ಗೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ದೆಹಲಿ ಪೊಲೀಸರು 600 ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ.

ದೆಹಲಿ ಪೊಲೀಸರು ಇತ್ತೀಚೆಗೆ ನಡೆಸಿದ ಅತ್ಯಂತ ದೊಡ್ಡ ಕಾರ್ಯಾಚರಣೆ ಇದ್ದಾಗಿದ್ದು, ಅಪ್ಘಾನ್ ಮೂಲದ 150 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದು ಇದರ ಮೌಲ್ಯ 600 ಕೋಟಿ ರೂ. ಆಗುತ್ತದೆ ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯ ವೇಳೆ ಐವರನ್ನು ಬಂದಿಸಿದ್ದು, ಟೋಯೋಟಾ ಕ್ಯಾಮ್ರಿ, ಹೊಂಡಾ ಸಿವಿಕ್ ಹಾಗೂ ಕೊರೊಲ್ಲಾ ಅಲ್ಟಿಸ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments