ಶತಮಾನಗಳಿಂದ ಆಚರಿಸುತ್ತಿದ್ದ ಐತಿಹಾಸಿಕ ಬೆಂಗಳೂರು ಕರಗಕ್ಕೆ ಹೈಕೋರ್ಟ್‌ ತಡೆಯಾಜ್ಞೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಕಾರಣ, ಶತಮಾನಗಳಿಂದ ಬೆಂಗಳೂರಿನಲ್ಲಿ ನಡೆದುಕೊಂಡು ಬರುತ್ತಿದ್ದ ಐತಿಹಾಸಿಕ ಕರಗ ಮಹೋತ್ಸವಕ್ಕೆ ಹೈಕೋರ್ಟ್‌ ಮೊದಲ ಬಾರಿಗೆ ತಡೆಯಾಜ್ಞೆ ನೀಡಿದೆ.

ಅಲ್ಲದೆ, ಈ ಸಮಾವೇಶವನ್ನು ನಡೆಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕರಗ ಉತ್ಸವವನ್ನು ಆಚರಿಸಲು ಅನುಮತಿ ನೀಡುವಂತೆ ಹೈಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಇಂದು ಆ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ “ಕರಗ ಉತ್ಸವಕ್ಕೆ ಸರ್ಕಾರ ಅನುಮತಿ ನೀಡಿದೆಯಾ? ಎಂದು ಸರ್ಕಾರಿ ಪರ ವಕೀಲರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ವಕೀಲರು ಸರ್ಕಾರ ಯಾವುದೇ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ವಾದ-ವಿವಾದಗಳ ನಂತರ ಅಂತಿಮ ತೀರ್ಪು ನೀಡಿದ ಹೈಕೋರ್ಟ್‌, ಕೇಂದ್ರ ಸರ್ಕಾರದ ಲಾಕ್ ಡೌನ್ ಆದೇಶವನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸಬೇಕು. ಮತ್ತು ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸಮಾವೇಶಕ್ಕೂ ಅನುಮತಿ ನೀಡಬಾರದು ಎಂದು ಸೂಚನೆ ನೀಡಿದೆ.

ಬೆಂಗಳೂರು ನಲ್ಲಿ ಲಾಕ್‌ಡೌನ್ ಇರುವ ಕಾರಣ ನಗರಾದ್ಯಂತ 144 ಸೆಕ್ಷನ್ ಜಾರಿ ಇದೆ. ನಿಷೇಧಾಜ್ಞೆ ಜಾರಿ ಇರುವ ಕಾರಣ ಯಾವುದೇ ಧಾರ್ಮಿಕ ಸಭೆ, ಸಮಾರಂಭಗಳಿಗೆ ಅನುಮತಿ ನೀಡುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಬೆಂಗಳೂರು ಕರಗವನ್ನ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು, ಆದರೆ ಆಚರಣೆ ಸಮಯದಲ್ಲಿ ಸಾರ್ವಜನಿಕರು ಭಾಗಿಯಾಗುತ್ತಾರೆ.

ಜನ ಜಂಗುಳಿಯಲ್ಲಿ ಕೊರೊನಾ ಹರಡುವ ಸಾಧ್ಯತೆಯಿದೆ.. ಹೀಗಾಗಿ ಬೆಂಗಳೂರು ಕರಗ ಆಚರಣೆ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ​ ಲಾಕ್​ ಡೌನ್​​ ಮಾಡಲಾಗಿದೆ, ಬೆಂಗಳೂರು ಕರಗವನ್ನು ಸಾಂಪ್ರದಾಯಕವಾಗಿ ಮುರಿಯಬಾರದು ಎನ್ನುವ ಕಾರಣಕ್ಕೆ, ರಾಜ್ಯ ಸರ್ಕಾರ ಸಾಂಕೇತಿಕವಾಗಿ ಕರಗ ಆಚರಣೆ ಮಾಡಲು ಅವಕಾಶ ನೀಡಿತ್ತು.

ಕಾಂಗ್ರೆಸ್ ಮುಖಂಡ ಪಿ. ಆರ್​. ರಮೇಶ ಸಿಎಂಗೆ ಯಾವ ಕಾಲದಿಂದಲೂ ಬೆಂಗಳೂರು ಕರಗವನ್ನು ನಿಲ್ಲಿಸಿಲ್ಲ. ಟಿಪ್ಪು ಸುಲ್ತಾನ್ ಕಾಲದಿಂದಲೂ ಆಚರಣೆ ಮಾಡಲಾಗುತ್ತಿದೆ.. ಈ ಹಿಂದೆ ಪ್ಲೇಗ್​​ ರೋಗ ಬಂದಾಗಲೂ ಕೂಡ ಆಚರಣೆ ಮಾಡಲಾಗಿತ್ತು. ಹಾಗಾಗಿ ಕರಗಕ್ಕೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಇದೀಗ ಸಿಎಂ ಆದೇಶ ಹೊರಡಿಸಿದರೂ ಹೈಕೋರ್ಟ್ ಕರಗ ನಡೆಸದಂತೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಕರಗ ಮಹೋತ್ಸವಕ್ಕೆ ಸಾಕಷ್ಟು ಐತಿಹಾಸಿಕ ಹಿನ್ನೆಲೆ ಇದೆ. ಇಲ್ಲಿನ ತಿಗಳರ ಸಮುದಾಯ ಈ ಸಂಪ್ರದಾಯವನ್ನು ತಲೆತಲಾಂತರಗಳಿಂದ ಪಾಲಿಸುತ್ತಿದೆ. ಪ್ರತಿ ಏಪ್ರಿಲ್ ತಿಂಗಳ ಎರಡನೇ ವಾರ ನೆರವೇರುವ ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಲಕ್ಷಾಂತರ ಜನ ಬೆಂಗಳೂರಿಗೆ ಆಗಮಿಸುತ್ತಾರೆ. ಹೀಗಾಗಿ ಸಾಂಕೇತಿಕವಾಗಿಯಾದರೂ ಆಚರಣೆಗೆ  ಅವಕಾಶ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು.

Facebook Comments

Sri Raghav

Admin