ಪಾದರಾಯನಪುರದಲ್ಲಿ ಟೈಟ್ ಸೆಕ್ಯೂರಿಟಿ, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.20- ಕೊರೊನಾ ಶಂಕಿತರನ್ನು ಕ್ವಾರಂಟೈನ್‍ಗೆ ಕರೆದೊಯ್ಯುವ ಸಂದರ್ಭದಲ್ಲಿ ನಗರದ ಪಾದರಾಯನಪುರದಲ್ಲಿ ನಿನ್ನೆ ಸಂಜೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕೆಎಸ್‍ಆರ್‍ಪಿ ಹಾಗೂ ಸಿಎಆರ್‍ನ 15 ತುಕಡಿಗಳನ್ನು ನಿಯೋಜಿಸಲಾಗಿದೆ.

ಇಬ್ಬರು ಡಿಸಿಪಿ, ಐವರು ಎಸಿಪಿ, 15 ಇನ್ಸ್‍ಪೆಕ್ಟರ್, 25 ಸಬ್ ಇನ್ಸ್‍ಪೆಕ್ಟರ್ ಹಾಗೂ 150 ಸಹಾಯಕ ಸಬ್‍ಇನ್ಸ್‍ಪೆಕ್ಟರ್‍ಗಳನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ವಹಿಸಲಾಗಿದೆ ಎಂದು ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

5 ಪ್ರಕರಣ ದಾಖಲು ಭಾಸ್ಕರ್ ರಾವ್ :
ಬೆಂಗಳೂರು, ಏ.20- ನಗರದ ಪಾದರಾಯನಪುರದಲ್ಲಿ ನಿನ್ನೆ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ. ನಾವು ಲಾಠಿಯನ್ನು ತ್ಯಾಗ ಮಾಡಿಲ್ಲ. ಈಗ ಬಳಸುತ್ತಿಲ್ಲ ಅಷ್ಟೆ. ಯಾವಾಗ ಲಾಠಿಯನ್ನು ಬಳಸಬೇಕೋ ಆಗ ಬಳಸುತ್ತೇವೆ ಎಂದರು.

ನಿನ್ನೆಯ ಘಟನೆಯ ತನಿಖಾ ವರದಿ ನೋಡಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

Facebook Comments

Sri Raghav

Admin