ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಅಂತಿ ಹೆಚ್ಚು ಮತದಾನ, 2ನೇ ಸ್ಥಾನದಲ್ಲಿ ದಕ್ಷಿಣ ಕನ್ನಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.19-ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.68.56ರಷ್ಟು ಮತದಾನ ನಡೆದಿದ್ದು, ಕಳೆದ ಬಾರಿಗಿಂತ ಹೆಚ್ಚಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.80.23ರಷ್ಟು ಮತದಾನವಾಗಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.53.47ರಷ್ಟು ಮತದಾನವಾಗಿದೆ. ಕಳೆದ ಬಾರಿ 14 ಕ್ಷೇತ್ರಗಳಲ್ಲೂ ಶೇ.67.76ರಷ್ಟು ಮತದಾನವಾಗಿತ್ತು.

ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಶಾಂತಿಯುತವಾಗಿ ನಿನ್ನೆ ಮತದಾನ ನಡೆದಿದೆ. ಭಾರತದ ಚುನಾವಣಾ ಆಯೋಗ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.

ಇದಕ್ಕೆ ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದವು. ಆದರೂ ಬೆಂಗಳೂರು ನಗರದ ಮತದಾನದ ಪ್ರಮಾಣ ಕಳೆದ ಬಾರಿಗಿಂತ ಕಡಿಮೆಯಾಗಿದೆ. ಆದರೆ ಬೆಂಗಳೂರು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin