ಆಗ್ರಾ ಸಮೀಪ ಪ್ರಯಾಣಿಕರಿದ್ದ ಖಾಸಗಿ ಬಸ್ ಹೈಜಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

ಆಗ್ರಾ (ಉ.ಪ್ರ), ಆ.19- ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದನ್ನು ಅಪಹರಿಸಿರುವ ಘಟನೆ ಇಂದು ಬೆಳಗ್ಗೆ ಉತ್ತರ ಪ್ರದೇಶದ ಆಗ್ರಾ ಸಮೀಪ ನಡೆದಿದೆ. ಪ್ರಾಥಮಿಕ ತನಿಖೆ ಪ್ರಕಾರ ಹಣಕಾಸು ಸಂಸ್ಥೆ ಏಜೆಂಟ್‍ಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯ ಪ್ರದೇಶದ ಪನ್ನಾದಿಂದ ಹರಿಯಾಣದ ಗುರ್‍ಗಾಂವ್‍ಗೆ ತೆರಳುತ್ತಿದ್ದ ಖಾಸಗಿ ಬಸ್ ಅನ್ನು ಮಾರ್ಗ ಮಧ್ಯದಲ್ಲೇ ಫೈನಾನ್ಸ್ ಕಂಪೆನಿಯ ಏಜೆಂಟ್‍ಗಳು ಅಪಹರಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಕಾರಿ ಬಬ್ಲುಕುಮಾರ್ ತಿಳಿಸಿದ್ದಾರೆ.

ಆಗ್ರಾ ಸಮೀಪದ ಮಾಲ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಹೃತ ಬಸ್‍ನಿಂದ ಕೆಳಗೆ ಇಳಿದ ಮೂವರು ಪ್ರಯಾಣಿಕರು ಪೊಲೀಸರಿಗೆ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

ಖಾಸಗಿ ಹಣಕಾಸು ಸಂಸ್ಥೆಯೊಂದರಿಂದ ಈ ಬಸ್ ಖರೀದಿಗೆ ಸಾಲ ಪಡೆಯಲಾಗಿತ್ತು. ಆದರೆ ಸಕಾಲದಲ್ಲಿ ಅಸಲು ಮತ್ತು ಬಡ್ಡಿ ಪಾವತಿಸದ ಹಿನ್ನೆಲೆಯಲ್ಲಿ ಬಸ್ ಅನ್ನು ಹೈಜಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು , ಅಪಹೃತ ಪ್ರಯಾಣಿಕರ ಬಸ್‍ಗಾಗಿ ಶೋಧ ಮುಂದುವರೆಸಿದ್ದಾರೆ.

Facebook Comments

Sri Raghav

Admin