ಬಾಂಗ್ಲಾ ಹಿಂದೂಗಳ ಮೇಲಿನ ದಬ್ಬಾಳಿಕೆಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್,ಅ.21-ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯಿಂದ ಭಾರಿ ತೊಂದರೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರಧಾನಿ ಶೇಖ್ ಹಸಿನಾ ಅವರು ಹಿಂದೂಗಳ ಮೇಲಿನ ದಬ್ಬಾಳಿಕೆ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕಾದಲ್ಲಿನ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಎಚ್ಚರಿಕೆ ನೀಡಿದೆ.

ಕಳೆದ ಬುಧವಾರದಿಂದ ಬಾಂಗ್ಲಾದಲ್ಲಿರುವ ಹಿಂದೂ ದೇವಾಲಯಗಳ ಮೇಲೆ ನಿರಂತರವಾಗಿ ದಾಳಿಯಾಗುತ್ತಿದೆ. ಇತ್ತಿಚೆಗೆ ಒಂದು ಕೋಮಿನ ಗುಂಪು 66 ಹಿಂದೂಗಳ ಮನೆ ಮೇಲೆ ದಾಳಿ ನಡೆಸಿ 20ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಟ್ಟಿತ್ತು.

ಇಂತಹ ಘಟನೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕೂಡಲೆ ತಪ್ಪಿತಸ್ಥ ಮತಾಂದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕಾದಲ್ಲಿನ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದ ಅಧ್ಯಕ್ಷ ನದಿನೇ ಮಾಯೆಂಜ ಹೇಳಿದ್ದಾರೆ.

ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಹಿಂದೂ ವಿರೋಗಳನ್ನು ಮಟ್ಟ ಹಾಕಲು ಕೂಡಲೆ ಪ್ರಧಾನಿ ಹಸಿನಾ ಅವರು ಸ್ಥಳಕ್ಕೆ ಪ್ಯಾರಾಮಿಲಿಟರಿ ಪಡೆಗಳನ್ನು ರವಾನೆ ಮಾಡಿ ಅಲ್ಪಸಂಖ್ಯಾತರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಬಾಂಗ್ಲಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಹಾಗೂ ಹಿಂದೂಗಳ ಮೇಲಿನ ಹಲ್ಲೆ ಪ್ರಕರಣದಿಂದ ಆಯೋಗ ತೀವ್ರ ಅಸಮಾಧಾನಗೊಂಡಿದೆ ಎಂದು ಆಯೋಗದ ಕಮಿಷನರ್ ಅನುರಿಮಾ ಭಾರ್ಗವ ಹೇಳಿದ್ದಾರೆ.

ಕೋಮು ಗಲಭೆ ಸಂದರ್ಭದಲ್ಲಿ ನೂರಾರು ಹಿಂದೂಗಳ ಮೇಲೆ ದಾಳಿ ನಡೆದಿದೆ. ಕೆಲವರು ದಾಳಿಯಿಂದ ಸಾವನ್ನಪ್ಪಿರುವ ಪ್ರಕರಣಗಳು ಕಂಡು ಬಂದಿದೆ. ಕೂಡಲೆ ಬಾಂಗ್ಲಾ ಸರ್ಕಾರ ಅಲ್ಲಿರುವ ಅಲ್ಪಸಂಖ್ಯಾತರ ರಕ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೂಲಗಳ ಪ್ರಕಾರ ಬಾಂಗ್ಲಾದಲ್ಲಿ ನಡೆದ ಗಲಭೆಯಲ್ಲಿ ಆರು ಮಂದಿ ಹಿಂದೂಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲೆಕ್ಕಕ್ಕೆ ಸಿಗದ ಇನ್ನಷ್ಟು ಮಂದಿ ಮತಾಂಧರ ದಾಳಿಗೆ ಸಾವಿಗೀಡಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

169 ಮಿಲಿಯನ್ ಜನಸಂಖ್ಯೆ ಹೊಂದಿರುವ ಬಾಂಗ್ಲಾದಲ್ಲಿ ಶೇ.10 ರಷ್ಟು ಮಂದಿ ಹಿಂದೂಗಳಿದ್ದು, ಅಲ್ಲಿ ಅವರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿರುವುದು ಉಲ್ಲೇಖಾರ್ಹ. ಅದರಲ್ಲೂ ಹಿಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವುದು ಗಂಭೀರ ವಿಚಾರವಾಗಿದೆ.

Facebook Comments