ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಬುದ್ಧಿಜೀವಿಗಳ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ,ಅ.18- ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಬ್ಬಾಳಿಕೆ ಹಾಗೂ ದುರ್ಗಾ ಮಾತೆ ದೇವಾಲಯವನ್ನು ಹಾಳು ಮಾಡಿದವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪಶ್ಚಿಮ ಬಂಗಾಳದ ಬುದ್ದಿಜೀವಿಗಳು ಶೇಖ್ ಹಸಿನಾ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬಂಗಾಳದ ಖ್ಯಾತ ಶಿಕ್ಷಣ ತಜ್ಞರು, ರಂಗಭೂಮಿ ಕಲಾವಿದರು, ಲೇಖಕರು, ಸಿನಿಮಾ ನಟರು, ನಿರ್ದೇಶಕರು, ರಾಜಕಾರಣಿಗಳು ಸೇರಿದಂತೆ 60ಕ್ಕೂ ಹೆಚ್ಚು ಬುದ್ಧಿಜೀವಿಗಳು ಬಾಂಗ್ಲಾ ಪ್ರಧಾನಮಂತ್ರಿ ಶೇಖ್ ಹಸಿನಾ ಅವರಿಗೆ ಪತ್ರ ಬರೆದಿದ್ದಾರೆ.

ಕೆಲ ದುಷ್ಕರ್ಮಿಗಳು ದುರ್ಗಾ ದೇವಾಲಯದ ಮೇಲೆ ದಾಳಿ ಮಾಡಿ ಶಿಥಿಲಗೊಳಿಸಿರುವುದರಿಂದ ಬಾಂಗ್ಲಾದಲ್ಲಿರುವ ನೂರಾರು ಹಿಂದೂಗಳು ನವರಾತ್ರಿ ಸಂದರ್ಭದಲ್ಲಿ ದೇವಿ ಆರಾಧನೆ ಮಾಡಲು ಹಿಂದೇಟು ಹಾಕುವಂತಾಗಿದೆ. ಹೀಗಾಗಿ ಕೂಡಲೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಕೊಡಿಸಬೇಕು ಎಂದು ಬುದ್ಧಿಜೀವಿಗಳು ಮನವಿ ಮಾಡಿಕೊಂಡಿದ್ದಾರೆ.

ಯಾವುದೇ ಒಂದು ದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ರಕ್ಷಣೆ ಆಯಾ ಸರ್ಕಾರಗಳ ಹೊಣೆ ಹೀಗಾಗಿ ಬಾಂಗ್ಲಾದಲ್ಲಿ ನೆಲೆಸಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಹತ್ತಿಕ್ಕಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

Facebook Comments