ಅಧಿವೇಶನದಲ್ಲಿ ನೆರೆ ಚರ್ಚೆಗೆ ಸಿಗದ ಅವಕಾಶ : ಎಚ್‍ಕೆಕೆ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.27- ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆ ಹಾವಳಿಯ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಅವಕಾಶ ಸಿಗಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿ ವಿಚಾರದ ಬಗ್ಗೆ ಪ್ರಸ್ತಾಪ ಮಾಡಲು ವಿಧಾನಸಭೆಯಲ್ಲಿ ನಿಯಮ 69ರ ಅಡಿ ನೋಟಿಸ್ ನೀಡಲಾಗಿತ್ತು. ಸದನದ ಕಾರ್ಯಕಲಾಪಗಳ ಪಟ್ಟಿಯಲ್ಲೂ ಈ ವಿಚಾರವಿತ್ತು. ಆದರೆ, ಸಮಯದ ಅಭಾವದಿಂದ ವಿಷಯ ಪ್ರಸ್ತಾಪ ಮಾಡಲು ಅವಕಾಶವೇ ಸಿಗಲಿಲ್ಲ. ಸಭಾಧ್ಯಕ್ಷರ ಗಮನ ಸೆಳೆದರೂ ಉಪಯೋಗವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವಲ್ಲಿ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ. ಅಲ್ಲದೆ ಸಕಲೇಶಪುರ, ಕೊಡಗು, ಆಲೂರು ಮೊದಲಾದ ಕಡೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ.

ಈ ಬಗ್ಗೆ ಸರ್ಕಾರದ ಗಮನ ಸೆಳೆದು ಉತ್ತರ ಪಡೆಯುವ ಉದ್ದೇಶವಿತ್ತು. ಸಾಕಷ್ಟು ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಲು ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

Facebook Comments

Sri Raghav

Admin