ರಾಜ್ಯದ ಜನತೆ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ : ಎಚ್.ಕೆ. ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.9- ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸ್ಥಿರ ಸರ್ಕಾರ ಮುಂದುವರೆಯಬೇಕು ಎಂಬ ಉದ್ದೇಶದಿಂದ ಆಡಳಿತಾರೂಢ ಬಿಜೆಪಿಗೆ ಹೆಚ್ಚು ಮತ ಹಾಕಿದ್ದಾರೆ ಎಂದರು.

ಅಲ್ಲದೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರನ್ನು ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದರು.

ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಯಾಗಲಿದೆ ಎಂಬ ಭರವಸೆಯಲ್ಲಿ ವಿಶ್ವಾಸವಿಟ್ಟು ಜನತೆ ಮತ ನೀಡಿದ್ದಾರೆ. ಭಾವನಾತ್ಮಕ ವಿಚಾರಕ್ಕೆ ಮತದಾರರು ಹೆಚ್ಚು ಮಹತ್ವ ಕೊಟ್ಟಂತಾಗಿದೆ.

ಉಪಚುನಾವಣೆಯಲ್ಲಿ ಜೆಡಿಎಸ್‍ಗೆ ಭಾರೀ ಹಿನ್ನಡೆಯಾಗಿದ್ದು , ಪಕ್ಷವನ್ನು ಪುನರ್ ಸಂಘಟನೆ ಮಾಡುವತ್ತ ಗಮನ ಹರಿಸಲಾಗುವುದು. ಎಲ್ಲಾ ರೀತಿಯಲ್ಲೂ ಪಕ್ಷ ಸಂಘಟಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಶಕ್ತಿ ತುಂಬ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

Facebook Comments