“ಕೊರೋನಾ ನಿಯಂತ್ರಣ ಮತ್ತು ಚಿಕಿತ್ಸೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.20-ಕೋವಿಡ್-19ರ ವೈರಸ್ ಹರಡುವಿಕೆ ನಿಯಂತ್ರಿಸಲು ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ‌.ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ತೀವ್ರಗತಿಯಲ್ಲಿ ಕೊವಿಡ್ ಹೆಚ್ಚಾಗುತ್ತಿರುವುದನ್ನು ನಿಯಂತ್ರಿಸುವಲ್ಲಿ ರಾಜ್ಯಸರ್ಕಾರ ಯಶಸ್ಸು ಕಂಡಿಲ್ಲ. ಒಂದು ವಾರದ ಲಾಕ್ಡೌನ್ ಮುಕ್ತಾಯವಾಗುವ ಹಂತಕ್ಕೆ ಬಂದಿದೆ.

ಇದರಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪ್ರತಿ ಶನಿವಾರ ಮತ್ತು ಭಾನುವಾರ ವನ್ನು ಕಡ್ಡಾಯವಾಗಿ ಲಾಕ್ ಡೌನ್ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಉಳಿದ ದಿನಗಳಲ್ಲೂ ಲಾಕ್ ಡೌನ್ ಸಡಿಲ ಮಾಡಿದರೂ ಕೆಲವು ಷರತ್ತು‌ ವಿಧಿಸಿ ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳಬೇಕು. ಕೊರೋನಾ ಬೇಗ ತೊಲಗುವುದಿಲ್ಲವಾದ್ದರಿಂದ ಇನ್ನೂ ಕೆಲವು ತಿಂಗಳು ಇದೇ ಪರಿಸ್ಥಿತಿ ಮುಂದುವರೆಸುವುದು ಸೂಕ್ತ ಎಂದರು.

ವೈದ್ಯಕೀಯ ಸಿಬ್ಬಂದಿ ಕೊರತೆ ನಿವಾರಿಸಲು ಸರ್ಕಾರ ದಂತ ವೈದ್ಯರ ಸೇವೆ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು. ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕೇವಲ ಎಚ್ಚರಿಕೆಗಳನ್ನು ಮಾತ್ರ ನೀಡುತ್ತಾ ಬಂದಿದೆ.

ಯಾರ ಮೇಲೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು ಕೋವಿಡ್ ಸೋಂಕಿತರು ಸೂಕ್ತ ಚಿಕಿತ್ಸೆ ಇಲ್ಲದೆ ಪರದಾಡುವುದು ನಿಂತಿಲ್ಲ. ಕೆಲವರಿಗೆ ಬೆಡ್ ಸಿಕ್ಕಿಲ್ಲ. ಇನ್ನು ಮತ್ತೆ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದರು.

Facebook Comments

Sri Raghav

Admin