ಡ್ರಗ್ಸ್ ದಂಧೆಗೆ ಬ್ರೇಕ್ ಹಾಕೋವರೆಗೂ ಕಾರ್ಯಾಚರಣೆ ನಿಲ್ಲಲ್ಲ : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.4- ಡ್ರಗ್ಸ್ ದಂಧೆಗೆ ಕಡಿವಾಣ ಹಾಕೋವರೆಗೂ ಕಾರ್ಯಾಚರಣೆ ನಿಲ್ಲದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲದ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಪ್ರಗತಿ ಕಾಣುತ್ತಿದೆ. ತನಿಖೆಯಲ್ಲಿ ಹೊಸ ಆಯಾಮಗಳು ಸಿಗುತ್ತಿವೆ. ಡ್ರಗ್ಸ್ ಪೂರೈಕೆಯ ಮೂಲವನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಎರಡನೆ ಹಂತದ ನಗರಗಳಲ್ಲೂ ಡ್ರಗ್ಸ್ ಜಾಲಗಳಿದ್ದು, ಅಲ್ಲಿಯೂ ನಿಯಂತ್ರಣ ಹೇರುವ ನಿಟ್ಟಿನಲ್ಲಿ ನಾಳೆ ಜಿಲ್ಲೆಗಳ ಎಸ್ಪಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಲಾಗುವುದು. ಎಲ್ಲ ಕಡೆಗಳಲ್ಲೂ ಕಾರ್ಯಾಚರಣೆ ಮುಂದುವರೆಸುತ್ತೇವೆ. ಚಿತ್ರನಟಿ ರಾಗಿಣಿ ನಿವಾಸದ ಮೇಲಿನ ದಾಳಿ ಸಿಸಿಬಿ ತನಿಖೆಯ ಒಂದು ಭಾಗವಾಗಿದೆ ಎಂದರು.

ಕಾನೂನು ಪ್ರಕಾರ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿಸಿಬಿ ತೆಗೆದುಕೊಳ್ಳಲಿದೆ ಎಂದ ಅವರು, ಸಿಸಿಬಿ ತನಿಖೆಯಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಸ್ಪಷ್ಟಪಡಿಸಿದರು‌

Facebook Comments

Sri Raghav

Admin