ಶಾಸಕಾಂಗ ಸಭೆಯೂ ಇಲ್ಲ, ಔತಣಕೂಟವೂ ಇಲ್ಲ : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.22- ಬಿಜೆಪಿ ಪಕ್ಷದ ಹೈಕಮಾಂಡ್ ಸೂಚನೆಯಂತೆ ಸದ್ಯಕ್ಕೆ ಔತಣಕೂಟ, ಶಾಸಕಾಂಗ ಸಭೆ ನಡೆಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಔತಣಕೂಟ, ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಲಾಗಿತ್ತು. ವರಿಷ್ಠರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಎಲ್ಲರ ಅಭಿಪ್ರಾಯವನ್ನೂ ಕ್ರೋಢೀಕರಿಸಿ ಮುಖ್ಯಮಂತ್ರಿ ವಿಚಾರದ ಬಗ್ಗೆ ಹೈಕಮಾಂಡ್ ಚರ್ಚೆ ಮಾಡುತ್ತಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದು ನಂತರ ಮುಖ್ಯಮಂತ್ರಿ ಜೊತೆ ಮಾತನಾಡಿ ನಿರ್ಧಾರ ಮಾಡುತ್ತಾರೆ ಎಂದರು.

ದೆಹಲಿಗೆ ಹೋಗಿ ಬಂದ ಮೇಲೆ ಮುಂದಿನ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವುದು ತಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಿ ಮುಂದೆ ಪಕ್ಷವನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಹೇಳಿದರು.

Facebook Comments