ಬೈಲನರಸಾಪುರ ಗ್ರಾಮದ ಎಲ್ಲಾ ಕುಟುಂಬಗಳಿಗೂ ಹೋಂ ಕ್ವಾರಂಟೇನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಏ. 07 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ, ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಸೋಂಕು ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿನ ಎಲ್ಲಾ ಕುಟುಂಬಗಳನ್ನು ಹೋಂ‌ ಕ್ವಾರಂಟೀನ್ ನಲ್ಲಿರಿಸಿ,

ಅವರಿಗೆ ಆಹಾರ, ನೀರು, ಔಷಧಿ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಸಿ.ಮಂಜುನಾಥ್ ಅವರನ್ನು ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ವಿಶೇಷ ಅಧಿಕಾರಿಯನ್ನಾಗಿ ನೇಮಕ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin