ಹಾಸನ ಜಿಲ್ಲೆಯಲ್ಲಿ ನಾಳೆಯಿಂದ ಹೋಂ ಸ್ಟೇ ಮತ್ತು ರೆಸಾರ್ಟ್‍ಗಳು ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಜು.3- ಜಿಲ್ಲೆಯ ಸಕಲೇಶಪುರ-ಆಲೂರು ಹಾಗೂ ಬೇಲೂರು ತಾಲ್ಲೂಕಿನ 100ಕ್ಕೂ ಹೆಚ್ಚು ಹೊಂ ಸ್ಟೇ ಮತ್ತು ರೆಸಾರ್ಟ್‍ಗಳನ್ನು ನಾಳೆಯಿಂದ ಕ್ಲೋಸ್ ಆಗಲಿವೆ.

ಈ ಬಗ್ಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ, ನಾಳೆಯಿಂದ ಮುಂದಿನ ಆದೇಶದವರೆಗೂ ರೆಸಾರ್ಟ್‍ಗಳು ಹೋಂ ಸ್ಟೇಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ರೆಸಾರ್ಟ್‍ಗಳಿಗೆ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ರಾಜ್ಯದೆಲ್ಲೆಡೆ ಕೊರೊನಾ ಹೆಚ್ಚಾಗುತ್ತಲೇ ಇದೆ. ಪ್ರವಾಸಿಗರಿಂದ ನಮ್ಮ ತಾಲ್ಲೂಕಿನಲ್ಲೂ ಸೋಂಕು ಹರಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದರು.

ಅಲ್ಲದೆ ಕಂದಾಯ ಸಚಿವ ಆರ್.ಅಶೋಕ್ ಅವರು ಕೂಡ ಹೋಂ ಸ್ಟೇ ಹಾಗೂ ರೆಸಾರ್ಟ್‍ಗಳನ್ನು ಸದ್ಯಕೆ ಮುಚ್ಚುವಂತೆ ಸೂಚಿಸಿದ್ದಾರೆ. ಒಟ್ಟಾರೆ ಕೊರೊನಾ ಹೆಚ್ಚಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

Facebook Comments