ಗಡಿಪಾರು ನೀತಿ ವಿರುದ್ಧ ಹಾಂಕಾಂಗ್‍ನಲ್ಲಿ ಭಾರೀ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಂಕಾಂಗ್, ಜೂ.10 (ಪಿಟಿಐ)- ವಲಸಿಗರನ್ನು ಗಡಿಪಾರು ಮಾಡುವ ಹೊಸ ತಿದ್ದುಪಡಿ ಕಾಯ್ದೆಯನ್ನು ಚೀನಾ ಇಂದು ಅಧಿಕೃತವಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಾಂಕಾಂಗ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತಷ್ಟು ಉಗ್ರ ಸ್ವರೂಪ ಪಡೆದು ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಶಾಂಘೈ ಸೇರಿದಂತೆ ಹಾಂಕಾಂಗ್‍ನ ಪ್ರಮುಖ ವಾಣಿಜ್ಯ ನಗರಗಳಲ್ಲಿ ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಜನರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹೊಸ ನೀತಿ ವಿರುದ್ಧ ಹೋರಾಟ ತೀವ್ರಗೊಳಿಸಿದ್ದಾರೆ.

ಚೀನಾ ಸರ್ಕಾರದ ಹೊಸ ವಲಸೆ ಮತ್ತು ಗಡಿಪಾರು ನೀತಿಯಿಂದ ತಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಹಾಂಕಾಂಗ್ ನಾಗರಿಕರು ಪ್ರತಿಭಟನೆ ಹಾದಿ ತುಳಿದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ