ಹೊಸಕೋಟೆಯ ದೊಡ್ಡ ಕೆರೆಗ ನೀರು ತುಂಬಿಸುವ ಯೋಜನೆ ಪೂರ್ಣ : ಪುಟ್ಟರಾಜು

ಈ ಸುದ್ದಿಯನ್ನು ಶೇರ್ ಮಾಡಿ

puttaraju-sesstion

ಬೆಂಗಳೂರು, ಜು.9-ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಿಂದ ಏತನೀರಾವರಿ ಮೂಲಕ ಹೊಸಕೋಟೆ ದೊಡ್ಡ ಕೆರೆಗ ನೀರು ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಕಾರ್ಯನಿರ್ವಹಿಸುತ್ತಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ವಿಧಾನಪರಿಷತ್‍ನಲ್ಲಿ ತಿಳಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಈ ಕೆರೆ ನೀರನ್ನು ಏತನೀರಾವರಿ ಯೋಜನೆ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ದಕ್ಷಿಣ ಪಿನಾಕಿನಿ ನದಿಗೆ ಹರಿಸುವ ಯಾವುದೇ ಯೋಜನೆ ಇರುವುದಿಲ್ಲ. ಆದರೆ ಹೊಸಕೋಟೆ ದೊಡ್ಡ ಕೆರೆಗೆ 293 ಲಕ್ಷ ರೂ. ವೆಚ್ಚದಲ್ಲಿ ನೀರು ಹರಿಸುವ ಯೋಜನೆ ಪೂರ್ಣಗೊಂಡು ಕಾರ್ಯನಿರ್ವಹಿಸುತ್ತಿದೆ.
ಇದರಿಂದ ಅಂತರ್ಜಲ ವೃದ್ಧಿಗೊಂಡು ಈ ಭಾಗದಲ್ಲಿರುವ ಬೋರ್‍ವೆಲ್‍ಗಳಲ್ಲಿ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

Facebook Comments

Sri Raghav

Admin