BREAKING : ರಾಜ್ಯದ ಎಲ್ಲ ಪೊಲೀಸರಿಗೂ ಸಿಹಿಸುದ್ದಿ..!

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ, ಸೆ. 27 : ರಾಜ್ಯ ಸರಕಾರವು, ಎಲ್ಲ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆಯನ್ನು ಹೊಂದಿದ್ದು, ಸುಮಾರು 10000 ವಸತಿಗೃಹ ಗಳ ನಿರ್ಮಾಣ ಕಾರ್ಯ ತೆಗೆದುಕೊಳ್ಳಲಾಗುವುದು, ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಅವರು ತಿಳಿಸಿದ್ದಾರೆ.

ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ, ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ , ಅಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆಯನ್ನು, ನೆರವೇರಿಸಿ, ಮಾತನಾಡುತ್ತ ಸಚಿವರು, ಈ ಮಾಹಿತಿ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಒಟ್ಟು 21 ಕೋಟಿ ವೆಚ್ಚದಲ್ಲಿ ಪೊಲೀಸ್ ಠಾಣೆ, ಸಂಚಾರಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹ ನಿರ್ಮಾಣ ಯೋಜನೆಯ, ಶಂಕುಸ್ಥಾಪನೆ ಮಾಡಲಾಗಿದೆ, ಮತ್ತು ಮುಂದಿನ ಒಂದು ವರ್ಷದಲ್ಲಿ ಎರಡು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 100 ಪೊಲೀಸ್ ಠಾಣೆ ಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ, ಎಂದರು.

“ಈ ಮೂಲಕ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳೂ ಮುಂದಿನ ದಿನಗಳಲ್ಲಿ, ಸ್ವಂತ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಲಿವೆ” ಎಂದು ಸಚಿವರು ತಿಳಿಸಿದರು.ಪ್ರಸಕ್ತ 49 ಪ್ರತಿಶತ ಪೊಲೀಸ್ ಸಿಬ್ಬಂದಿಗಳಿಗೆ, ವಸತಿ ಸೌಲಭ್ಯ ಒದಗಿಸಲಾಗಿದ್ದು, “ಎಲ್ಲ ಪೊಲೀಸ್ ಸಿಬ್ಬಂದಿಗಳಿಗೂ ವಸತಿ ಸೌಲಭ್ಯ ಒದಗಿಸುವ ಕನಸು ಸದ್ಯದಲ್ಲಿಯೇ ನನಸಾಗುವುದು” ಎಂದು ಸಚಿವರ ಹೇಳಿದರು.

ಪೊಲೀಸ್ ಇಲಾಖೆಗೆ ಸುಮಾರು 250 ವಿಧಿ ವಿಜ್ಞಾಲಯ ತಜ್ಞರ ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ ಸಚಿವರು, “ಇದರಿಂದ ದಾಖಲಾದ ಅಪರಾಧ ಪ್ರಕರಣಗಳ ತ್ವರಿತ ವಿಲೇವಾರಿಗೆನೆರವಾಗುವುದು” ಎಂದು ಅಭಿಪ್ರಾಯ ಪಟ್ಟರು.

ಆನ್ ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಪಾಸು ಮಾಡಲಾಗಿದೆ. ಕಾಗ್ನಿಜಿಬಲ್ ಪ್ರಕರಣ ಎಂದು ದಾಖಲಿಸಿಕೊಂಡು. ಜಾಮೀನು ರಹಿತವಾಗಿ ತನಿಖೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಜೂಜಾಟ, ಆನ್ ಲೈನ್ ಜೂಜುಕಾರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ. ಔರಾದಕರ್ ವರದಿ ಜಾರಿಗೆ ತರಲಾಗುತ್ತಿದೆ. ಪೊಲೀಸರಿಗೆ ಇದರಿಂದ ಅನುಕೂಲವಾಗಿದೆ.

52 ಜನ ಇಂಜಿನಿಯರಿಂಗ್,ಪದವಿ ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು ಪೊಲೀಸ್ ಇಲಾಖೆ ಯ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಅಗ್ನಿ ಶಾಮಕ ದಳ ಬಲಪಡಿಸಲಾಗುತ್ತಿದೆ. ವಿದೇಶದಿಂದ ಉಪಕರಣಗಳನ್ನು ತರಿಸಿಕೊಂಡು ಸಶಸ್ತ್ರ ಘಟಕ ಬಲಪಡಿಸಲಾಗುತ್ತಿದೆ ಎಂದರು.

ಶಂಕುಸ್ಥಾಪನೆ ನೆರವೇರಿಸಿ, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಯವರೂ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಶ್ರೀ ಪ್ರಸಾದ ಅಬ್ಬಯ್ಯ ವಹಿಸಿದ್ದರು.

ಕೈಮಗ್ಗ,ಜವಳಿ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ,ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ,ಕುಸುಮಾವತಿ ಶಿವಳ್ಳಿ,ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ , ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಕರ್ನಾಟಕ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡ್ರ,ರಾಜ್ಯ ರೇಷ್ಮೇ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ,ವಾಕರಸಾಸಂ ಅಧ್ಯಕ್ಷ ವಿ.ಎಸ್.ಪಾಟೀಲ,ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಉತ್ತರ ವಲಯ ಐಜಿಪಿ ಎನ್.ಸತೀಶಕುಮಾರ,ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ,ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin